ಬರೋಬ್ಬರಿ 6 ತಿಂಗಳ ನಂತರ ಟೆಸ್ಟ್ ಸೀರೀಸ್ ಆಡುತ್ತಿರೋ ಟೀಮ್ ಇಂಡಿಯಾ
ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನಲ್ಲಿ ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಶುರು
ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿ ಆಪ್ತನಿಗೆ ಕೊಕ್
ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದ್ರೆ, ಕೆಲ ಆಟಗಾರರಿಗೆ ಜಾಕ್ಪಾಟ್ ಹೊಡೆದಿದೆ. ಅಷ್ಟೇ ಅಲ್ಲ.! ಕೆಲ ಆಟಗಾರರಿಗೆ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.
ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾ..!
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಕೋಟಾದದಲ್ಲಿ ಆರ್.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ.
ವೇಗಿ ಮುಖೇಶ್ ಕುಮಾರ್, ಕನ್ನಡಿಗ ಪಡಿಕ್ಕಲ್ಗೆ ಕೊಕ್..!
ಇಂಗ್ಲೆಂಡ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಮಖೇಶ್, ದುಲೀಪ್ ಟ್ರೋಫಿಯಲ್ಲಿ ಇಂಪ್ರೆಸ್ಸಿಂಗ್ ಪರ್ಫಾಮೆನ್ಸ್ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಟೆಸ್ಟ್ ತಂಡದಿಂದ ಕೊಕ್ ನೀಡಲಾಗಿದೆ. ಆದ್ರೆ, ಕನ್ನಡಿಗ ಪಡಿಕ್ಕಲ್, ಉತ್ತಮ ಪ್ರದರ್ಶನದ ಹೊರತಾಯೂ ತಂಡದಿಂದ ಗೇಟ್ಪಾಸ್ ನೀಡಲಾಗಿದೆ.
ಬಾಂಗ್ಲಾ ವಿರುದ್ಧದ ಟೆಸ್ಟ್‌ಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಧೃವ್ ಜುರೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ; ಟೀಮ್ ಇಂಡಿಯಾದಿಂದ ಕನ್ನಡಿಗ ಕೆ.ಎಲ್ ರಾಹುಲ್ಗೆ ಬಂಪರ್ ಆಫರ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ