ವಿರಾಟ್ ಕೊಹ್ಲಿ ಬೆರಳಿಗೆ ಗಾಯ.. ಅಭಿಮಾನಿಗಳ ಆತಂಕಕ್ಕೆ RCB ಕೋಚ್ ಉತ್ತರ..!

author-image
Ganesh
Updated On
ವಿರಾಟ್ ಕೊಹ್ಲಿ ಬೆರಳಿಗೆ ಗಾಯ.. ಅಭಿಮಾನಿಗಳ ಆತಂಕಕ್ಕೆ RCB ಕೋಚ್ ಉತ್ತರ..!
Advertisment
  • ವಿರಾಟ್ ಕೊಹ್ಲಿ ಫಿಟ್ನೆಸ್ ಬಗ್ಗೆ ಆ್ಯಂಡಿ ಫ್ಲವರ್ ಏನಂದ್ರು
  • ಗುಜರಾತ್ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಬಾಲ್ ತಾಗಿತ್ತು
  • ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ನೆಕ್ಸ್ಟ್​ ಮ್ಯಾಚ್

ವಿರಾಟ್ ಕೊಹ್ಲಿ ಅವರಿಗೆ ಯಾವುದೇ ಗಾಯವಾಗಿಲ್ಲ. ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಅಂತಾ ಆರ್​ಸಿಬಿ ಮುಖ್ಯ ಕೋಚ್, ಆ್ಯಂಡಿ ಫ್ಲವರ್​ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 2 ರಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಗುಜರಾತ್ ಟೈಟನ್ಸ್​ ವಿರುದ್ಧ ಆಡಿತ್ತು. ಆರ್​ಸಿಬಿ ಫೀಲ್ಡಿಂಗ್ ಅವಧಿಯಲ್ಲಿ ಕೊಹ್ಲಿ ಅವರ ಕೈಬೆರಳಿಗೆ ಬಾಲ್ ತಾಗಿತ್ತು. ಕೂಡಲೇ, ಆರ್​ಸಿಬಿ ತಂಡದ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಬಂದು ಆರೈಕೆ ಮಾಡಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ಮುಂದಿನ ಪಂದ್ಯಕ್ಕೆ ಅವರು ಫಿಟ್ ಆಗಿದ್ದಾರಾ? ಇಲ್ಲವಾ ಎಂಬ ಅನುಮಾನಗಳು ಶುರುವಾಗಿದ್ದವು. ಇದೀಗ ಕೋಚ್​, ಅದೆಲ್ಲದಕ್ಕೂ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಸುದೀಪ್‌, ಜಗ್ಗೇಶ್ ಜೊತೆ ಕಿರಿಕ್‌.. ಸ್ಯಾಂಡಲ್​ವುಡ್ ನಿರ್ಮಾಪಕ M.N ಕುಮಾರ್ ಬಂಧನ; ಏನಿದು ಕೇಸ್‌?

ಆರ್​ಸಿಬಿಯ ತನ್ನ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ವಾಂಖೆಡೆ ಮೈದಾನದಲ್ಲಿ ಏಪ್ರಿಲ್ 7 ರಂದು ಸಂಜೆ 7.30 ರಿಂದ ಪಂದ್ಯ ಆರಂಭವಾಗಲಿದೆ. ಸ್ಟಾರ್​ ಸ್ಪೋರ್ಟ್ಸ್​ ವಾಹಿನಿಗಳಲ್ಲಿ ಪಂದ್ಯ ನೇರಪ್ರಸಾರ ಆಗಲಿದೆ.

ಈಗಾಗಲೇ ಮೂರು ಪಂದ್ಯಗಳನ್ನು ಆಡಿರುವ ಮುಂಬೈ ಇಂಡಿಯನ್ಸ್, ಎರಡರಲ್ಲಿ ಸೋತು ಕೇವಲ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನು ಪಾಯಿಂಟ್ಸ್ ಪಟ್ಟಿಯಲ್ಲಿ ಆರ್​ಸಿಬಿ ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್​ ಐದನೇ ಸ್ಥಾನದಲ್ಲಿದೆ. ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮೊದಲು ಮುಂಬೈ ಇಂಡಿಯನ್ಸ್, ನಾಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ.

ಇದನ್ನೂ ಓದಿ: ಅಬ್​ ಕಿ ಬಾರ್ 300 ಎಂದ ತಂಡಕ್ಕೆ ಹ್ಯಾಟ್ರಿಕ್ ಸೋಲು.. IPL ಇತಿಹಾಸದಲ್ಲಿ ಕೆಟ್ಟ ದಾಖಲೆ..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment