/newsfirstlive-kannada/media/post_attachments/wp-content/uploads/2025/02/VIRAT_KOHLI_ROHIT.jpg)
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಚಾಂಪಿಯನ್ ಟ್ರೋಫಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈಗಾಗಲೇ ದುಬೈಗೆ ತೆರಳಿರುವ ಭಾರತದ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ್ದು ಈ ಕುರಿತು ಭಾರೀ ವಿರೋಧ ವ್ಯಕ್ತವಾಗಿದೆ.
2025ರ ಚಾಂಪಿಯನ್ ಟ್ರೋಫಿಯಲ್ಲಿ ಬಾಂಗ್ಲಾದೇಶದ ಜೊತೆ ಭಾರತ ತಂಡ ಮೊದಲ ಪಂದ್ಯವಾಡಲಿದೆ. ಫೆಬ್ರುವರಿ 20 ರಂದು ದುಬೈ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಎಲ್ಲ ಸಿದ್ಧತೆಗಳು ನಡೆದಿವೆ. ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರು ಧರಿಸುವ ಜೆರ್ಸಿಯನ್ನು ರಿಲೀಸ್ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾ, ಪೇಸ್ ಬೌಲರ್ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಜಡೇಜಾ, ಆರ್ಶ್ದೀಪ್ ಹೀಗೆ ಎಲ್ಲರೂ ಜರ್ಸಿ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಆದರೆ ಭಾರತದ ಪ್ಲೇಯರ್ಸ್ ಧರಿಸಿದ ಈ ಜೆರ್ಸಿಗಳ ಮೇಲೇ ಪಾಕಿಸ್ತಾನದ ಹೆಸರನ್ನು ಮುದ್ರಿಸಲಾಗಿದೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ. ಜೆರ್ಸಿ ಮೇಲೆ Champions Trophy 2025 Pakistan ಎಂದು ಮುದ್ರಿಸಿರುವುದು ಭಾರತದ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಚಾಂಪಿಯನ್ ಟ್ರೋಫಿಯ ಮೊದಲ ಉದ್ಘಾಟನಾ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿದೆ. ಅದರಂತೆ ಭಾರತ ಹಾಗೂ ಪಾಕ್ ನಡುವಿನ ಮ್ಯಾಚ್ ಫೆಬ್ರುವರಿ 23 ರಂದು ದುಬೈ ಸ್ಟೇಡಿಯಂನಲ್ಲಿ ನಡೆಯಲಿದೆ. ಹೈಬ್ರಿಡ್ ಮಾದರಿಯಂತೆ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಪಾಕಿಸ್ತಾನದ ಬದಲಿಗೆ ದುಬೈನಲ್ಲಿ ಆಡಲಿದೆ.
ಇದನ್ನೂ ಓದಿ: ಹಿರಿಯ ನಟನ ಮನೆಯಲ್ಲಿ ಮುಗಿಯದ ಜಗಳ.. ತಂದೆಯಿಂದಲೇ ದೂರು, ಆ್ಯಕ್ಟರ್ ಮನೋಜ್ ಅರೆಸ್ಟ್!
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಭಾರತದಲ್ಲಿರುವ ಯಶಸ್ವಿ ಜೈಸ್ವಾಲ್, ಮೊಹಮ್ಮದ್ ಸಿರಾಜ್ ಮತ್ತು ಶಿವಂ ದುಬೆ ಈ ಆಟಗಾರರು ಅಗತ್ಯ ಬಿದ್ದರೇ ದುಬೈಗೆ ತೆರಳುವ ಸಾಧ್ಯತೆ ಇರುತ್ತದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ