newsfirstkannada.com

ಟಿ20 ವಿಶ್ವಕಪ್​​.. ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ದೊಡ್ಡ ಆಘಾತ!

Share :

Published May 30, 2024 at 7:24pm

  2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​ ಮುಕ್ತಾಯ

  ಇದೇ ಜೂನ್ 2ರಿಂದ 2024ರ ಐಸಿಸಿ ವಿಶ್ವಕಪ್ ಪಂದ್ಯಾವಳಿ ಶುರು..!

  ಪಾಕಿಸ್ತಾನ​​ ವಿರುದ್ಧ ಗೆಲ್ಲಲು ಎದುರು ನೋಡುತ್ತಿರೋ ಭಾರತ ತಂಡ

ಯುಎಸ್​​​ ಮತ್ತು ವೆಸ್ಟ್​​ ಇಂಡೀಸ್​ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​ಗೆ ಕ್ಷಣಗಣನೆ ಶುರುವಾಗಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಇನ್ನು, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್‌ ಪಂದ್ಯಕ್ಕಾಗಿ ಇಡೀ ಜಗತ್ತೇ ಕಾಯುತ್ತಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್‌ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ. ಹೇಗಾದ್ರೂ ಮಾಡಿ ಈ ಪಂದ್ಯ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಭಾರೀ ತಯಾರಿ ನಡೆಸಿಕೊಂಡಿವೆ.

ಈ ಮುನ್ನವೇ ಟೀಮ್​ ಇಂಡಿಯಾಗೆ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಸಲಹೆ ನೀಡಿದ್ದಾರೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಜೊತೆ ಓಪನಿಂಗ್​ ಮಾಡಬೇಕು. ಕ್ಯಾಪ್ಟನ್​​ ರೋಹಿತ್​ ಶರ್ಮಾ ‘ಉತ್ತಮ ಸ್ಪಿನ್ ಆಟಗಾರ’ ಆಗಿದ್ದು, 3ನೇ ಕ್ರಮಾಂಕಕ್ಕೆ ಇಳಿಯಬೇಕು ಎಂದರು. ಜತೆಗೆ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದರು.

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಟಿ20 ವಿಶ್ವಕಪ್​ಗಾಗಿ ಈಗಾಗಲೇ ನ್ಯೂಯಾರ್ಕ್ ತಲುಪಿದ್ದಾರೆ. ಜೂನ್ 1ನೇ ತಾರೀಕು ಏಕೈಕ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ ಎದುರಿಸಲಿದೆ.

ಇದನ್ನೂ ಓದಿ: ಪಾಕ್​​, ಭಾರತ ನಡುವಿನ ಹೈವೋಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ; ಟೀಮ್​ ಇಂಡಿಯಾಗೆ ಗುಡ್​ನ್ಯೂಸ್​!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟಿ20 ವಿಶ್ವಕಪ್​​.. ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ದೊಡ್ಡ ಆಘಾತ!

https://newsfirstlive.com/wp-content/uploads/2024/05/Rohit_Rahul-Batting.jpg

Load More