/newsfirstlive-kannada/media/post_attachments/wp-content/uploads/2024/08/Virat-Kohli-Double-Century.jpg)
ಟೀಮ್​ ಇಂಡಿಯಾ, ಬಾಂಗ್ಲಾದೇಶ ನಡುವಿನ ಟೆಸ್ಟ್​ ಸರಣಿ ಮೇಲೆ ಕಣ್ಣು ನೆಟ್ಟಿದೆ. ಮುಂಬರೋ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಹೋಗಲು ಟೀಮ್​ ಇಂಡಿಯಾ ಈ ಸರಣಿ ಗೆಲ್ಲಲೇಬೇಕಿದೆ. ಸೆಪ್ಟಂಬರ್​​ 19ನೇ ತಾರೀಕಿನಿಂದ ನಡೆಯಲಿರೋ ಟೆಸ್ಟ್​​ ಸರಣಿಗಾಗಿ ಟೀಮ್​ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು, ಎಲ್ಲರ ಕಣ್ಣು ಒಬ್ಬ ಪ್ಲೇಯರ್ ಮೇಲಿದೆ.
ಇದುವರೆಗೆ ಬಾಂಗ್ಲಾದೇಶದ ವಿರುದ್ಧ ನಡೆದಿರೋ ಸರಣಿಯಲ್ಲಿ ಟೀಮ್ ಇಂಡಿಯಾದ ಆಟಗಾರರು ಸ್ಥಿರ ಪ್ರದರ್ಶನ ನೀಡುತ್ತಲೇ ಬಂದಿದ್ದಾರೆ. ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾದ ಮೂವರು ಆಟಗಾರರು ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲಿ ವಿರಾಟ್​ ಕೊಹ್ಲಿ ಒಬ್ಬರು ಎನ್ನುವುದು ವಿಶೇಷ.
ವಿರಾಟ್​ ಕೊಹ್ಲಿ ದ್ವಿಶತಕದ ಸಾಧನೆ!
ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ಎಂದೇ ಖ್ಯಾತಿಯಾಗಿರೋ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 7 ಬಾರಿ ದ್ವಿಶತಕದ ಸಾಧನೆ ಮಾಡಿದ್ದಾರೆ. ಹಾಗೆಯೇ ಬಾಂಗ್ಲಾ ವಿರುದ್ಧವೂ 2017ರಲ್ಲಿ ಕೊಹ್ಲಿ ದ್ವಿಶತಕ ಬಾರಿಸಿದ್ದರು.
ಹೈದರಾಬಾದ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಅಬ್ಬರಿಸಿದ್ದರು. ಕೊಹ್ಲಿ ಎದುರಿಸಿದ 246 ಎಸೆತಗಳಲ್ಲಿ 24 ಬೌಂಡರಿಗಳ ನೆರವಿನಿಂದ 204 ರನ್ ಗಳಿಸಿ ದಾಖಲೆ ನಿರ್ಮಿಸಿದ್ರು. ಬಾಂಗ್ಲಾ ವಿರುದ್ಧ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ವಿರಾಟ್ ಪಾತ್ರರಾಗಿದ್ದಾರೆ. ಹಾಗಾಗಿ ಮುಂದಿನ ಟೆಸ್ಟ್​ ಸರಣಿಯಲ್ಲಿ ಕೊಹ್ಲಿ ಮೇಲೆ ಬಾಂಗ್ಲಾದೇಶದ ಆಟಗಾರರ ಹದ್ದಿನ ಕಣ್ಣಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us