newsfirstkannada.com

ರಿಷಬ್ ಶೆಟ್ಟಿಗೆ ಮತ್ತೊಂದು ಗೌರವ.. ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ ನೀಡಿ ಅಭಿನಂದನೆ

Share :

Published June 28, 2023 at 9:07am

    ಐತಿಹಾಸಿಕ ಪ್ರಸಿದ್ಧ ಸಿನಿಮಾ ಮಂದಿರದಲ್ಲಿ ಪ್ರಶಸ್ತಿ ಪ್ರದಾನ

    ಅಮೆರಿಕ ಕನ್ನಡಿಗರ ಉದ್ದೇಶಿಸಿ ರಿಷಬ್ ಶೆಟ್ಟಿ ಭಾಷಣ

    ಅದ್ದೂರಿ ಕಾರ್ಯಕ್ರಮದ ಅದ್ಭುತ ಫೋಟೋಗಳು ಇಲ್ಲಿವೆ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಇತ್ತೀಚೆಗೆ ಅಮೆರಿಕಾದ ಸಿಯಾಟಲ್​​​ಗೆ ಭೇಟಿ ನೀಡಿದ್ದರು. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​ನಲ್ಲಿ (paramount theatre) ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್​​ನಲ್ಲಿರುವ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಉಪಸ್ಥಿತರಿದ್ದರು.

ಅಮೆರಿಕ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅಮೆರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

ವಾಷಿಂಗ್ಟನ್​ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್​ಗೆ 95 ವರ್ಷಗಳ ಇತಿಹಾಸವಿದೆ‌. ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌.

ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್​ನಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಫಿಲ್ಮಿ ಫಸ್ಟ್​’ ಪ್ರತಿದಿನ ಸಂಜೆ 5.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ರಿಷಬ್ ಶೆಟ್ಟಿಗೆ ಮತ್ತೊಂದು ಗೌರವ.. ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ ನೀಡಿ ಅಭಿನಂದನೆ

https://newsfirstlive.com/wp-content/uploads/2023/06/RISHAB.jpg

Load More