/newsfirstlive-kannada/media/post_attachments/wp-content/uploads/2024/07/KRS-3.jpg)
ಮಂಡ್ಯ: ಕೊಡಗು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿದೆ. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ದಿಢೀರನೇ 16 ಸಾವಿರ ಕ್ಯೂಸೆಕ್ಗೆ ಒಳಹರಿವು ಏರಿಕೆಯಾಗಿದೆ.
ಇದನ್ನೂ ಓದಿ:ನಾಪತ್ತೆ ಆಗಿದ್ದ ಹರಿಯಾಣ ಮಾಡೆಲ್ ಪ್ರಕರಣಕ್ಕೆ ಟ್ವಿಸ್ಟ್.. ಮಾಜಿ ಸ್ನೇಹಿತನ ಮೇಲೆ ಗುಮಾನಿ..
ಈಗಾಗಲೇ ಕೆಆರ್‌ಎಸ್ ಡ್ಯಾಂ 111 ಅಡಿ ಭರ್ತಿಯಾಗಿದೆ. ಕಳೆದ 10 ದಿನಗಳಿಂದ 2000 ಕ್ಯೂಸೆಕ್ ಇದ್ದ ಒಳಹರಿವು ಇದೀಗ ಒಳಹರಿವಿನ ಪ್ರಮಾಣ ಭಾರೀ ಏರಿಕೆ ಕಂಡಿದೆ. ಇನ್ನೂ ಡ್ಯಾಂಗೆ 16,936 ಕ್ಯೂಸೆಕ್ ನೀರು ಹರಿದು ಬರ್ತಿದೆ. ಹೀಗಾಗಿ ಡ್ಯಾಂನಿಂದ 951 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 32.686 ಟಿಎಂಸಿ ನೀರು ಸಂಗ್ರಹವಾಗಿದೆ.
ಇಂದಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಹೀಗಿದೆ..
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ: 111 ಅಡಿ
ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
ಇಂದಿನ ಸಾಮರ್ಥ್ಯ: 32.686 ಟಿಎಂಸಿ
ಒಳಹರಿವು: 16,936
ಹೊರ ಹರಿವು: 951
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ