5 ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ!
ಹವಾಮಾನ ಇಲಾಖೆ ತಜ್ಞ ಕೊಟ್ಟ ಎಚ್ಚರಿಕೆ ಏನು?
ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಮಳೆಯಾಗಲಿದೆ?
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್ 1 ಮತ್ತು 4ನೇ ತಾರೀಕಿನಂದು ಧಾರಾಕಾರ ಮಳೆಯಾದರೆ, 2 ಮತ್ತು 3ರಂದು ಸಾಧಾರಣ ಹನಿಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು, ಜನ ಎಚ್ಚರಿಕೆಯಿಂದ ಇರಬೇಕು. ಈಗಾಗಲೇ ರಾಮನಗರದ ಮಾಗಡಿಯಲ್ಲಿ ಅತ್ಯಧಿಕ ಎಂದರೆ 7 ಸೆಂಟಿ ಮೀಟರ್ ಮಳೆ ಸುರಿದಿದೆ. ಬೆಂಗಳೂರು 7, ಚಿಂತಾಮಣಿ ಮತ್ತು ವಿರಾಜಪೇಟೆ 5, ದೇವನಹಳ್ಳಿ ಕಡೆ 5 ಸೆಂಟಿ ಮೀಟರ್ ಮಳೆ ಬಿದ್ದಿದೆ. ಕರಾವಳಿ ಕರ್ನಾಟಕದಲ್ಲೂ ಮುಂದಿನ ಒಂದು ವಾರ ಗುಡುಗು ಸಹಿತ ಜೋರು ಮಳೆ ಆಗಲಿದೆ ಎಂದು ಅಲರ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1 ಮತ್ತು 4ನೇ ತಾರೀಖಿನಂದು ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.#newsfirstkannada #KannadaNews #rain #BangaloreRains #WeatherForecast #prasad pic.twitter.com/4z4A46fpf4
— NewsFirst Kannada (@NewsFirstKan) May 31, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ