/newsfirstlive-kannada/media/post_attachments/wp-content/uploads/2025/05/Operation-Sindoor2.jpg)
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಪಿ ಪಾಕಿಸ್ತಾನದ ಭಯೋತ್ಪಾದಕರು ದಾಳಿ ನಡೆಸಿದ್ದರು. ಅದರಲ್ಲೂ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಒಬ್ಬೊಬ್ಬರನ್ನೇ ಗುಂಡಿಕ್ಕಿ ಕೊಂದಿದ್ದರು. ಈ ದಾಳಿಯಲ್ಲಿ ಬರೋಬ್ಬರಿ 26 ಅಮಾಯಕರು ತಮ್ಮ ಹೆಂಡತಿ ಹಾಗೂ ಮಕ್ಕಳ ಮುಂದೆ ಪ್ರಾಣಬಿಟ್ಟಿದ್ದರು.
ಇದನ್ನೂ ಓದಿ:26 ಅಮಾಯಕ ಹೆಣ್ಮಕ್ಕಳ ಸಿಂಧೂರ ಅಳಿಸಿದ ಪ್ರತೀಕಾರವೇ ‘ಆಪರೇಷನ್ ಸಿಂಧೂರ..’
ಪಹಲ್ಗಾಮ್ ಮೇಲೆ ಭಯೋತ್ಪಾದಕರು ಮಾಡಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ನಡುರಾತ್ರಿ ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರವಾಗಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಟ್ಯಾಕ್ ಮಾಡಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡೋದಕ್ಕೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಏಪ್ರಿಲ್ 22ರಂದು ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ ಉಗ್ರರು ಮತ್ತು ಪಾಕ್ ವಿರುದ್ಧ ಕೈಗೊಂಡ ಅತೀ ದೊಡ್ಡ ಮಿಲಿಟರಿ ಕಾರ್ಯಾಚರಣೆಯೇ ಈ ‘ಆಪರೇಷನ್ ಸಿಂಧೂರ್’ ಆಗಿದೆ.
ಸಿಂಧೂರ ಪದದ ಅರ್ಥ..!
ಸಿಂಧೂರ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ, ಶಕ್ತಿ ದೇವತೆ ಪಾರ್ವತಿ, ದುರ್ಗಾ ಶಕ್ತಿಯ ಸಂಕೇತವಾಗಿದೆ. ಭಾರತೀಯ ಸೇನೆಯ ಧೈರ್ಯ, ತ್ಯಾಗ, ಶೌರ್ಯ ಮತ್ತು ದೇಶವನ್ನು ರಕ್ಷಿಸುವ ಸಂಕಲ್ಪವನ್ನು ಸೂಚ್ಯವಾಗಿ ತಿಳಿಸುತ್ತದೆ. ಇದು ಜೀವನ ಮತ್ತು ಬಲಿದಾನದೊಂದಿಗೆ ಸಂಬಂಧ ಹೊಂದಿದೆ. ಸಿಂಧೂರವು ಕೇವಲ ಒಂದು ವಸ್ತುವಲ್ಲ, ಭಾರತೀಯ ಸಂಸ್ಕೃತಿಯಲ್ಲಿ ಆಳವಾದ ಭಾವನಾತ್ಮಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಮೌಲ್ಯವನ್ನು ಹೊಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ