ಕೇಳಿದ್ದು 5 ಕೊನೆಗೆ 4 ಕ್ಷೇತ್ರಗಳಲ್ಲಿ ಹೊಂದಾಣಿಕೆಗೆ ಬಿಜೆಪಿ ಅಸ್ತು
ಕಾಂಗ್ರೆಸ್ ವಿರುದ್ಧ ಹೋರಾಡಲು ದೇವೇಗೌಡರ ಜೊತೆ ಚರ್ಚೆ
ಮಂಡ್ಯ, ಹಾಸನ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ
ರಾಜ್ಯ ರಾಜಕೀಯದಲ್ಲಿ ಇವತ್ತು ಮಹತ್ವದ ಬೆಳವಣಿಗೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಬಿಜೆಪಿ ಹೈಕಮಾಂಡ್ ನಾಯಕರು, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಮಧ್ಯೆ ನಡೆದಿರುವ ಮಾತುಕತೆಯಲ್ಲಿ ಮೈತ್ರಿ ಖಚಿತವಾಗಿದೆ ಎನ್ನಲಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕೀಯ ರಾಜ್ಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಲೋಕಸಭಾ ಚುನಾವಣೆ ಮತ್ತಷ್ಟು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: BJP-JDS ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು? ಒಳ್ಳೆಯದಾಗಲಿ, ಚೆನ್ನಾಗಿರಲಿ ಅಂದಿದ್ದೇಕೆ ಡಿ.ಕೆ ಶಿವಕುಮಾರ್
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಹೆಚ್.ಡಿ ದೇವೇಗೌಡರು ಮಹತ್ವದ ಚರ್ಚೆ ನಡೆಸಿದ್ದಾರೆ. ಮೈತ್ರಿ ಮಾತುಕತೆ ವೇಳೆ 5 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡಲು ದೇವೇಗೌಡರು ಪಟ್ಟು ಹಿಡಿದಿದ್ದರಂತೆ. ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಅಥವಾ ತುಮಕೂರು ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಕೊನೆಗೆ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಹೊಂದಾಣಿಕೆಗೆ ಬಿಜೆಪಿ ಹೈಕಮಾಂಡ್ ಅಸ್ತು ಎಂದಿದೆ ಎನ್ನಲಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಹೆಚ್.ಡಿ ದೇವೇಗೌಡ ಹಾಗೂ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕರ್ನಾಟಕವನ್ನ ಉಳಿಸಲು ವಿರೋಧ ಪಕ್ಷಗಳು ಒಂದಾಗಬೇಕು. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಮಾತುಕತೆ ನಡೆದಿದೆ. ಮುಂದಿನ ದಿನಗಳ ಹೋರಾಟಕ್ಕೆ ಈ ಮಾತುಕತೆ ಮಹತ್ವ ಪಡೆದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ನಮಗೆ 25ಕ್ಕೂ ಹೆಚ್ಚು ಸೀಟ್ ಗೆಲ್ಲಲು ಸಹಾಯ ಆಗುತ್ತೆ ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ