ನಗರಾಭಿವೃದ್ಧಿಗೆ ಒತ್ತು ನೀಡಿದ ಸಿದ್ದರಾಮಯ್ಯ ಸರ್ಕಾರ
ಬಜೆಟ್ನಲ್ಲಿ ಹೊಸ ಕಲ್ಪನೆಯನ್ನು ಜಾರಿಗೆ ತರುವ ಬಗ್ಗೆ ಉಲ್ಲೇಖ
ಬೆಂಗಳೂರು ಬಿಸಿನೆಸ್ ಕಾರಿಡಾರ್ಗೆ 27,000 ಕೋಟಿ ಮೀಸಲು
ಇಂದು ಸಿಎಂ ಸಿದ್ದರಾಮಯ್ಯನವರು ಮಂಡಿಸುತ್ತಿರುವ 2024-25ನೇ ಬಜೆಟ್ನಲ್ಲಿ ಬೆಂಗಳೂರು ನಗರಾಭಿವೃದ್ಧಿಯೂ ಒತ್ತು ನೀಡಲಾಗಿದೆ. ಅದರಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಕಲ್ಪನೆಯನ್ನು ಜಾರಿಗೆ ತರುವುದಾಗಿ ಹೇಳಿದೆ.
ಬೆಂಗಳೂರು ಬಿಸಿನೆಸ್ ಕಾರಿಡಾರ್ ಅಂದ್ರೆ ಏನು?
ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಚಟುವಟಿಕೆಗಳನ್ನು ವೃದ್ಧಿಸಲು ಪೆಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯೊಂದಿಗೆ ಅಭಿವೃದ್ಧಿಗೊಳಿಸಲು ಸರ್ಕಾರ ಮುಂದಾಗಿದೆ.
ಈ ಯೋಜನೆಯಡಿ 73 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗುತ್ತದೆ. ಕಾರಿಡಾರ್ ನಿರ್ಮಾಣಕ್ಕೆ ಅಂದಾಜು 27,000 ಕೋಟಿ ವೆಚ್ಚವನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಇದೇ ವರ್ಷ ಈ ಯೋಜನೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದೆ.
ಬೆಂಗಳೂರು ನಗರಾಭಿವೃದ್ಧಿಗಾಗಿ ಈ ಬಾರಿಯ ಬಜೆಟ್ನಲ್ಲಿ ಒತ್ತು ನೀಡಲಾಗಿದ್ದು, ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕ ಸುರಂಗ ಮಾರ್ಗ ನಿರ್ಮಾಣ ಮಾಡುವುದಾಗಿ ತಿಳಿಸಿದೆ. ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಂತರಾಷ್ಟ್ರೀಯ ತಜ್ಞರ ಸಮಿತಿ ನಿರ್ಮಿಸಲು ಮುಂದಾಗಿದೆ.
2027ರ ಒಳಗೆ ವಿಮಾನ ನಿಲ್ದಾಣದವರೆಗೂ ಮೆಟ್ರೋ
ಇದಲ್ಲದೆ, 250 ಮೀ. ಉದ್ದದ ಸ್ಕೈ ಡೆಕ್ ನಿರ್ಮಾಣಕ್ಕೆ ಆರ್ಕಿಟೆಕ್ಟ್ಸ್ಗೆ ಆಹ್ವಾನ ನೀಡಲಾಗಿದೆ. ಸರ್ಕಾರಿ ಇಲಾಖೆಗಳ ವಿದ್ಯುತ್ ಶುಲ್ಕ ಕಡಿತಕ್ಕೆ ಸೋಲಾರ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. 2025ರ ಮಾರ್ಚ್ ವೇಳೆಗೆ ಮೆಟ್ರೋ ರೈಲು 44 ಕಿ.ಮೀ. ವಿಸ್ತರಣೆ ಮಾಡುವುದಾಗಿ ತಿಳಿಸಿದೆ. 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣದವರೆಗೂ ಮೆಟ್ರೋ ಮಾರ್ಗ ಸಾಗಲಿದೆ ಎಂದು ತಿಳಿಸಿದೆ.
ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಪಾನ್ ತಂತ್ರಜ್ಞಾನ
ಇನ್ನು ಬಿಎಂಟಿಸಿಗೆ 1,334 ಹೊಸ ಎಲೆಕ್ಟ್ರಿಕ್ ಬಸ್ಗಳ ಸೇರ್ಪಡೆ, ಬಿಎಂಟಿಸಿ ಪ್ರಯಾಣಿಕರಿಗೆ ವೆಹಿಕಲ್ ಟ್ರ್ಯಾಕಿಂಗ್ ಌಪ್ ಸೌಲಭ್ಯ, ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಪಾನ್ ತಂತ್ರಜ್ಞಾನ, ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್ ಬಳಕೆ ಮತ್ತು ಬೆಂಗಳೂರಿನಲ್ಲಿ ವ್ಯಾಪಾರ, ವಹಿವಾಟು ತಡರಾತ್ರಿ 1ರವರೆಗೆ ವಿಸ್ತರಣೆ ಮಾಡಲು ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಯೋಚಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ