ಸಿದ್ದರಾಮಯ್ಯ 2.O ಸರ್ಕಾರದಲ್ಲಿ 8 ಸಚಿವರು
ಮೊದಲ ಹಂತದಲ್ಲಿ ಯಾವ ಸಮುದಾಯಕ್ಕೆ ಮಣೆ
ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರವೇ ಬೇರೆ
ಬೆಂಗಳೂರು: ರಾಜ್ಯದಲ್ಲಿ ಇಂದು ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಸಿಎಂ ಆಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿದ್ದರಾಮಯ್ಯ 2.O ಸರ್ಕಾರದಲ್ಲಿ 8 ಶಾಸಕರಿಗಷ್ಟೇ ಮಂತ್ರಿ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಎಂಟು ನೂತನ ಸಚಿವರ ಯಾರು ಅನ್ನೋದು ಈಗಾಗಲೇ ಅಧಿಕೃತವಾಗಿದೆ.
ಸಿಎಂ, ಡಿಸಿಎಂ ಜೊತೆಗೆ 8 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ 8 ನೂತನ ಸಚಿವರ ಆಯ್ಕೆ ಬಹಳಷ್ಟು ವಿಶೇಷವಾಗಿದೆ. ಕಾಂಗ್ರೆಸ್ ವರಿಷ್ಟರು ಅಳೆದು ತೂಗಿ, ಸಮುದಾಯವಾರು ಪ್ರಾತಿನಿದ್ಯ ನೀಡಿ ಆಯ್ಕೆ ಮಾಡಿದ್ದಾರೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊದಲ ಹಂತದ ಸಚಿವ ಸಂಪುಟದಲ್ಲಿ ಆದ್ಯತೆ ನೀಡಲಾಗಿದೆ. ಈ ಬಾರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎರಡೂ ಬಣಗಳ ಬಡಿದಾಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಅವಕಾಶ ನೀಡಿಲ್ಲ. ಮೊದಲ ಹಂತದ ಸಚಿವ ಸಂಪುಟದಲ್ಲಿ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ.
ನೂತನ ಸಚಿವರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ