newsfirstkannada.com

ಇಂಡಿಯಾ ಮೈತ್ರಿಕೂಟಕ್ಕೆ ಗುಡ್‌ಬೈ.. ಮಮತಾ ಬ್ಯಾನರ್ಜಿ ದಿಢೀರ್ ನಿರ್ಧಾರಕ್ಕೆ ಅಸಲಿ ಕಾರಣವೇನು?

Share :

Published January 24, 2024 at 5:33pm

Update January 24, 2024 at 5:27pm

    ಪಶ್ಚಿಮ ಬಂಗಾಳಕ್ಕೆ ಬರುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ

    ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ

    ಅಧೀರ್ ರಂಜನ್ ಚೌಧರಿ ಹೇಳಿಕೆಯ ಮರು ದಿನವೇ ದಿಢೀರ್ ಬೆಳವಣಿಗೆ

ನವದೆಹಲಿ: ಲೋಕಸಭಾ ಚುನಾವಣೆ ಕೇವಲ 2-3 ತಿಂಗಳಷ್ಟೇ ಬಾಕಿ ಇರುವಾಗ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಅತಿದೊಡ್ಡ ಸವಾಲು ಎದುರಾಗಿದೆ. ಬಿಜೆಪಿ ವಿರುದ್ಧ ಹೋರಾಡುತ್ತಿದ್ದ ಮಹಾಘಟಬಂಧನ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡ್‌ಬೈ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಏಕಾಂಗಿಯಾಗಿ ಹೋರಾಟ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಎಡಪಕ್ಷದ ಜೊತೆ ಮೈತ್ರಿ ಇಲ್ಲದೇ ಏಕಾಂಗಿಯಾಗಿ ಹೋರಾಡುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನು ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳವನ್ನು ಪ್ರವೇಶಿಸುತ್ತಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಮಮತಾ ಬ್ಯಾನರ್ಜಿ ಸೆಡ್ಡು ಹೊಡೆಯೋ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಲೋಕಸಭಾ ಸೀಟ್‌ ಶೇರಿಂಗ್ ವಿಚಾರ ಬಿಕ್ಕಟ್ಟಿಗೆ ಕಾರಣವಾಗಿತ್ತು. ಪಶ್ಚಿಮಬಂಗಾಳದಲ್ಲಿ 2ಕ್ಕಿಂತ ಹೆಚ್ಚು ಸ್ಥಾನ ಬಿಟ್ಟುಕೊಡಲು ನಿರಾಕರಿಸಿದ್ದ ದೀದಿ ಇಂದು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ದೀದಿ ದಿಢೀರ್ ನಿರ್ಧಾರಕ್ಕೆ ಕಾರಣವೇನು?
ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ಗೆ ಕೈ ಕೊಡಲು ಸೀಟು ಹಂಚಿಕೆಯಲ್ಲಿ ಉಂಟಾದ ಭಿನ್ನಾಭಿಪ್ರಾಯವೇ ಕಾರಣವಾಗಿದೆ. ಇದರ ಜೊತೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೇಳಿಕೆ ಮಮತಾ ಬ್ಯಾನರ್ಜಿ ಅವರನ್ನು ಕೆರಳಿಸಿದೆ. ತಮ್ಮನ್ನು ಅವಕಾಶವಾದಿ ಎಂದು ಅಧೀರ್ ರಂಜನ್ ಚೌಧರಿ ಅವರು ಕರೆದ ಮರು ದಿನವೇ ಇಂಡಿಯಾ ಮೈತ್ರಿಕೂಟಕ್ಕೆ ಗುಡ್‌ಬೈ ಘೋಷಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರದಿಂದ ಲೋಕಸಭಾ ಚುನಾವಣೆಯ ಸನಿಹದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಹುದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮೈತ್ರಿ ಮುರಿದು ಕೊಳ್ಳುತ್ತಿದ್ದಂತೆ ಪಂಜಾಬ್‌ನಲ್ಲೂ ಆಮ್ ಆದ್ಮಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂಡಿಯಾ ಮೈತ್ರಿಕೂಟಕ್ಕೆ ಗುಡ್‌ಬೈ.. ಮಮತಾ ಬ್ಯಾನರ್ಜಿ ದಿಢೀರ್ ನಿರ್ಧಾರಕ್ಕೆ ಅಸಲಿ ಕಾರಣವೇನು?

https://newsfirstlive.com/wp-content/uploads/2024/01/Mamata-Banerjee.jpg

Load More