newsfirstkannada.com

ಸಿನಿಮಾ ರಂಗಕ್ಕೆ ಗುಡ್‌ಬೈ ಹೇಳಿದ ನಿಖಿಲ್ ಕುಮಾರಸ್ವಾಮಿ; ದಿಢೀರ್‌ ನಿರ್ಧಾರಕ್ಕೆ ಕಾರಣವೇನು?

Share :

Published June 7, 2024 at 1:07pm

    ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ನಿಖಿಲ್ ದಿಢೀರ್ ನಿರ್ಧಾರ

    2019ರ ಲೋಕಸಭಾ ಚುನಾವಣೆ ಸೋಲು ನನ್ನ ಸೋಲಾಗಿರಲಿಲ್ಲ ಎಂದ ನಿಖಿಲ್

    ಚನ್ನಪಟ್ಟಣ ಉಪಚುನಾವಣೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈಗ 24*7 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಎಂದಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜೆಡಿಎಸ್ ಮಂಡ್ಯ, ಕೋಲಾರ ಕ್ಷೇತ್ರವನ್ನು ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರು ನಾನು‌ ಇನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. ನಾನು ಇನ್ನು ಫುಲ್‌ ಟೈಮ್ ರಾಜಕಾರಣಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸಚಿವ ಸ್ಥಾನ ಫಿಕ್ಸ್‌? ಪ್ರಧಾನಿ ಜೊತೆ ಪ್ರಮಾಣ ಸ್ವೀಕರಿಸೋರು ಯಾರು? 

ನಾನು ಇನ್ನು ಮುಂದೆ ಸಿನಿಮಾ ಮಾಡೋದು‌ ಬಂದ್ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, 2019ರ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯಿತು. ಮಂಡ್ಯ ಜನ ನನಗೆ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ‌ ಅಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ‌ ಮಂಡ್ಯ ಸಂಸದರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ‌. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ?
ಇದೇ ವೇಳೆ ರಾಜ್ಯದಲ್ಲಿ ನಡೆಯುವ ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಮೈತ್ರಿ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ನನ್ನ ಆಸಕ್ತಿ ಪಕ್ಷ ಸಂಘಟನೆಯಲ್ಲಿದೆ. ಚನ್ನಪಟ್ಟಣ ಉಪಚುನಾವಣೆ ವಿಚಾರ ಮಾತನಾಡುವುದು ಈಗ ಅಪ್ರಸ್ತುತ ಎಂದು ನಿಖಿಲ್ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿನಿಮಾ ರಂಗಕ್ಕೆ ಗುಡ್‌ಬೈ ಹೇಳಿದ ನಿಖಿಲ್ ಕುಮಾರಸ್ವಾಮಿ; ದಿಢೀರ್‌ ನಿರ್ಧಾರಕ್ಕೆ ಕಾರಣವೇನು?

https://newsfirstlive.com/wp-content/uploads/2023/09/Nikhil-Kumaraswamy.jpg

Load More