/newsfirstlive-kannada/media/post_attachments/wp-content/uploads/2024/05/Minister-B-Nagendra-1.jpg)
ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಸಾವಿನ ಬೆನ್ನಲ್ಲೇ ಬಹುದೊಡ್ಡ ಅಕ್ರಮವೊಂದು ರಾಜ್ಯ ರಾಜ್ಯಕಾರಣದಲ್ಲಿ ಸದ್ದು ಮಾಡಿತ್ತು. ಇದೀಗ ಇದೇ ಪ್ರಕರಣದ ವಿಚಾರವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಬಳ್ಳಾರಿಯ ಕಾಂಗ್ರೆಸ್ ಮುಖಂಡರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಏನಿದು ಹಗರಣ..?
ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ವಿವಿಧ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 89.62 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ ಅನ್ನೋದು ಪ್ರಕರಣದ ಪ್ರಮುಖ ಆರೋಪ.
ED ದಾಖಲೆಯಲ್ಲಿ ಏನಿದೆ..?
ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ಹಣದಲ್ಲಿ 89.62 ಕೋಟಿ ಹಣ ದುರ್ಬಳಕೆ ಆಗಿದೆ. ಪ್ರಕರಣ ಸಂಬಂಧ ದಾಳಿ ಮಾಡಿದಾಗ ಅನೇಕ ಸಾಕ್ಷಿಗಳು ಲಭ್ಯವಾಗಿದೆ ಎಂದು ಇ.ಡಿ. ಹೇಳಿಕೊಂಡಿದೆ. ಈ ಹಿಂದೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿ 23 ಕಡೆಗಳಲ್ಲಿ ಇಡಿ ದಾಳಿ ನಡೆಸಿತ್ತು.
ಇದನ್ನೂ ಓದಿ: ಬಳ್ಳಾರಿ ಕಾಂಗ್ರೆಸ್ ನಾಯಕರಿಗೆ ED ಶಾಕ್.. ಸಂಸದ ಇ.ತುಕಾರಾಂ ಸೇರಿ ಹಲವರ ನಿವಾಸದ ಮೇಲೆ ದಾಳಿ
18 ನಕಲಿ ಅಕೌಂಟ್ಗಳಿಗೆ ಹಣ ಟ್ರಾನ್ಸಫರ್ ಆಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಅಕೌಂಟ್ ಗಳಿಗೆ ಹಣ ವರ್ಗಾವಣೆ ಆಗಿದೆ. ಬಳಿಕ ವಿತ್ ಡ್ರಾ ಮಾಡಿ ಹವಾಲಾ ಮೂಲಕ ಹಂಚಿಕೆಯಾಗಿದೆ. ಕ್ಯಾಶ್ ಮತ್ತು ಚಿನ್ನದ ರೂಪದಲ್ಲಿ ಸಾಗಾಟ ಮಾಡಿ ಹಣವನ್ನು ಹಂಚಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದರು. ಹಗರಣ ಬಯಲಾದ ಬಳಿಕ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಹಣ ಏನು ಮಾಡಿದ್ದರು?
ಹಗರಣದ ಹಣವನ್ನು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿಗೆ ಬಳಕೆ ಮಾಡಿರೋದು ಪತ್ತೆಯಾಗಿದೆ. ಮಾಧ್ಯಮ ಪ್ರಕಟಣೆಯಲ್ಲಿ ಸ್ವತಃ ಇಡಿ ಅಧಿಕಾರಿಗಳೇ ಈ ವಿಚಾರವನ್ನು ತಿಳಿಸಿದ್ದಾರೆ. ಚುನಾವಣೆಗೂ ಮುನ್ನ ಮದ್ಯ ಸಂಗ್ರಹ ಮಾಡಲು ಹಣ ಬಳಕೆಯಾಗಿದೆ. ಹೆಚ್ಚುವರಿ ಹಣವನ್ನ ತಮ್ಮ ಖಾತೆಗೆ ಹಾಕಿಸಿಕೊಂಡು ವೈಯಕ್ತಿವಾಗಿ ದುರ್ಬಳಕೆ ಮಾಡಲಾಗಿದೆ. ಕೆಲವು ಆರೋಪಿಗಳು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಓರ್ವ ಆರೋಪಿ ಲ್ಯಾಂಬೋರ್ಗಿನಿ ಖರೀದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ಶಾಸಕ ದದ್ದಲ್ ಪಾತ್ರ
ಇಡಿ ತನಿಖೆಯಲ್ಲಿ ಶಾಸಕ ಬಸವನಗೌಡ ದದ್ದಲ್ ಪಾತ್ರವೂ ಪತ್ತೆಯಾಗಿದೆ. ನಾಗೇಂದ್ರ ಜೊತೆ ನಿಕಟ ಸಂಪರ್ಕ ಹೊಂದಿದ್ದ ದದ್ದಲ್, ಮನೆಯಲ್ಲಿ ಶೋಧ ನಡೆಸಿದಾಗ ಅನೇಕ ಸಾಕ್ಷಿಗಳು ಲಭ್ಯವಾಗಿವೆ ಎಂದು ಈ ಹೇಳಿದೆ. ಹಣ ವರ್ಗಾವಣೆ, ಹಂಚಿಕೆ ಮತ್ತು ದುರ್ಬಳಕೆಗೆ ಸಂಬಂಧಿಸಿದಂತೆ ದಾಖಲೆಗಳು ಸಿಕ್ಕಿವೆ.
ಇದನ್ನೂ ಓದಿ: BREAKING: ಗಾಲಿ ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ