newsfirstkannada.com

ಯದುವೀರ್​​ಗೆ ಬಿಜೆಪಿ ಟಿಕೆಟ್​​.. ಅಂದು ಘರ್ಜಿಸಿದ್ದ ಪ್ರತಾಪ್​​ ಸಿಂಹ ಇಂದು ಮಾಡಿದ್ದೇನು?

Share :

Published March 13, 2024 at 8:20pm

Update March 13, 2024 at 8:21pm

  ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆ 2ನೇ ಪಟ್ಟಿ ರಿಲೀಸ್​​

  ಯದುವೀರ್‌ ಒಡೆಯರ್‌ಗೆ ಟಿಕೆಟ್‌ ಘೋಷಿಸುತ್ತಿದ್ದಂತೆ ಪ್ರತಾಪ್‌ ಸಿಂಹ ಟ್ವೀಟ್‌

  ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ- ಪ್ರತಾಪ್​ ಸಿಂಹ

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಯದುವೀರ್ ಒಡೆಯರ್‌ಗೆ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಮೈಸೂರು ಮಹಾರಾಜ ಯದುವೀರ್ ಒಡೆಯರ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದ ಪ್ರತಾಪ್ ಸಿಂಹ ಅವರು ಇಂದು ಸಾಫ್ಟ್ ಆಗಿದ್ದಾರೆ.

ಇದನ್ನು ಓದಿ: BREAKING: ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​​ ಘೋಷಣೆ; ಮೈಸೂರಿನಿಂದ ಯದುವೀರ್​​ ಕಣಕ್ಕೆ!

ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್‌ಗೆ ಟಿಕೆಟ್‌ ಘೋಷಿಸುತ್ತಿದ್ದಂತೆ ಪ್ರತಾಪ್ ಸಿಂಹ ಅವರು ಮೈಸೂರಿನ ಯದುವೀರ್​​ ಒಡೆಯರ್ ಅವರಿಗೆ ಟ್ವೀಟ್​ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿದ ಪ್ರತಾಪ್​ ಸಿಂಹ, ಮಹಾರಾಜ ಯದುವೀರ್ ಶ್ರೀಗಳಿಗೆ ಅಭಿನಂದನೆಗಳು. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ ಎಂದು ಬರೆದುಕೊಂಡಿದ್ದಾರೆ.  ಮೈಸೂರಿನಿಂದ ಲೋಕಸಭಾ ಕ್ಷೇತ್ರದಿಂದ ಟಿಕೆಟ್​ ಸಿಗುತ್ತಿದ್ದಂತೆ ಶುಕ್ರವಾರ ಬಿಜೆಪಿ ಪಕ್ಷಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ನ್ಯೂಸ್​ ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.  ಆದರೆ ಈ ಭಾರೀ ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದೆ.

ತಡರಾತ್ರಿ ಸಂಸದ ಪ್ರತಾಪ್​​ ಸಿಂಹ ಅವರಿಗೆ ಟಿಕೆಟ್​ ಕೈ ತಪ್ಪಿದಕ್ಕೆ ಬೇಸರ ಹೊರ ಹಾಕಿದ್ದರು. ಇದರ ಜತೆಗೆ ಪ್ರತಾಪ್​​ ಸಿಂಹಗೆ ಟಿಕೆಟ್‌ ನೀಡುವಂತೆ ಅವರ ಅಭಿಮಾನಿಗಳು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ ಎಂದು ಘೋಷಣೆ ಕೂಗಿದ ಅಭಿಮಾನಿಗಳು ಪ್ರತಾಪ್ ಅವರು ಪೋಸ್ಟರ್ ಅಭಿಯಾನ ನಡೆಸಿದ್ದರು. ಪ್ರತಾಪ್ ಸಿಂಹ ಅವರು ಅತ್ಯುತ್ತಮ ಕೆಲಸಗಾರರಾಗಿದ್ದು ರಾಜ್ಯದಲ್ಲಿ ನಂಬರ್ ಒನ್ ಸಂಸದರಾಗಿದ್ದಾರೆ. ಕಳೆದ 70 ವರ್ಷಗಳಲ್ಲಿ ಯಾರೂ ಮಾಡದಷ್ಟು ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯದುವೀರ್​​ಗೆ ಬಿಜೆಪಿ ಟಿಕೆಟ್​​.. ಅಂದು ಘರ್ಜಿಸಿದ್ದ ಪ್ರತಾಪ್​​ ಸಿಂಹ ಇಂದು ಮಾಡಿದ್ದೇನು?

https://newsfirstlive.com/wp-content/uploads/2024/03/prathap-simha-2.jpg

Load More