newsfirstkannada.com

ಕೊಡಗು ಬಾಲಕಿ ಬರ್ಬರ ಹತ್ಯೆ ಕೇಸ್‌ಗೆ ರೋಚಕ ಟ್ವಿಸ್ಟ್‌.. ರುಂಡ ಹುಡುಕಾಡಿದ ಪೊಲೀಸರು ಹೇಳಿದ್ದೇನು?

Share :

Published May 10, 2024 at 8:16pm

  ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಸುಳ್ಳು

  ಆರೋಪಿ ಪ್ರಕಾಶ್‌ ಕೋವಿಯೊಂದಿಗೆ ಕಾಡಿನತ್ತ ಪರಾರಿಯಾಗಿರೋ ಸುಳಿವು

  ಕೊಡಗು ಎಸ್‌ಪಿ ಕೆ.ರಾಮರಾಜನ್‌ ಅವರಿಂದ ಪ್ರಕರಣದ ಬಗ್ಗೆ ಮಾಹಿತಿ

ಕೊಡಗು ಅಪ್ರಾಪ್ತೆ ರುಂಡ ಕತ್ತರಿಸಿದ ಬರ್ಬರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಕೊಲೆ ಮಾಡಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಬಂದಿತ್ತು. ಆದರೆ, ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಕೊಲೆಯಾದ ಬಾಲಕಿ ಮೀನಾ ರುಂಡ ಕೂಡ ಇನ್ನೂ ಸಿಕ್ಕಿಲ್ಲ ಅನ್ನೋ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿ ಪ್ರಕಾಶ್ ತಲೆಮರೆಸಿಕೊಂಡಿದ್ದ. ಹಂತಕನ ಹುಡುಕಾಟದಲ್ಲಿರುವ ಪೊಲೀಸರಿಗೆ ಆರೋಪಿ ಮೃತದೇಹ ಪತ್ತೆಯಾಗಿತ್ತು ಅನ್ನೋ ಸುದ್ದಿ ಬಯಲಾಗಿತ್ತು. ಆದರೆ ಕೊಡಗು ಎಸ್‌ಪಿ ಕೆ.ರಾಮರಾಜನ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಸೂರ್ಲಬಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಹತ್ಯೆ ಮಾಡಿದ್ದ ಆರೋಪಿ ಆತ್ಮಹತ್ಯೆ ಬಗ್ಗೆ ಖಚಿತ ಮಾಹಿತಿ ಇಲ್ಲ. ಕೊಲೆಯಾದ ಜಾಗ ಕುಗ್ರಾಮ ಮತ್ತು ಮೊಬೈಲ್‌ ನೆಟ್‌ವರ್ಕ್ ಇಲ್ಲದ ಕಾರಣ ತಪ್ಪು ಮಾಹಿತಿ ರವಾನೆಯಾಗಿದೆ. ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಸುಳ್ಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಡಗು: ಬಾಲಕಿ ರುಂಡ ಕತ್ತರಿಸಿದ ಕೇಸ್‌ಗೆ ಹೊಸ ಟ್ವಿಸ್ಟ್‌.. ಅಸಲಿಗೆ ನಡೆದಿದ್ದೇನು? ಇಂಚಿಂಚೂ ಮಾಹಿತಿ ಇಲ್ಲಿದೆ! 

ಪೊಲೀಸರಿಗೆ ಕೊಲೆ ಮಾಡಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಬಂದಿತ್ತು. ಆದರೆ ಪ್ರಕಾಶ್ ಸಾವನ್ನಪ್ಪಿದ್ದಾನೆ ಅನ್ನೋ ಸ್ಥಳಕ್ಕೆ ಹೋಗಿ ಭೇಟಿ ನೀಡಿದಾಗ ಯಾವುದೇ ಮೃತದೇಹ ಸಿಕ್ಕಿಲ್ಲ. ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯಾರೋ ಸ್ಥಳೀಯರು ಸುಳ್ಳು ಸುದ್ದಿ ಹಬ್ಬಿಸಿರುವ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.

ಕೊಡಗು ಎಸ್‌ಪಿ ಕೆ.ರಾಮರಾಜನ್‌ ಅವರು ದುರ್ಘಟನೆ ನಡೆದ ಪ್ರದೇಶ ದಟ್ಟ ಅರಣ್ಯಕ್ಕೆ ಹೊಂದಿಕೊಂಡಿದೆ. ನಿನ್ನೆ ಕೊಲೆ ಮಾಡಿದ ಆರೋಪಿ ಪ್ರಕಾಶ್‌ ಕೋವಿಯೊಂದಿಗೆ ಕಾಡಿನತ್ತ ಪರಾರಿಯಾಗಿದ್ದಾನೆ. ಆರೋಪಿಯ ಮನಸ್ಥಿತಿ ಸರಿಯಿಲ್ಲದ ಕಾರಣ ಏನಾದರೂ ಅನಾಹುತ ಆದ್ರೆ ಅನ್ನೋ ಭಯ ಕಾಡುತ್ತಿದೆ. ರಾತ್ರಿ ವೇಳೆ ಕಾಡಿನಲ್ಲಿ ಹುಡುಕುವಾಗ ಆರೋಪಿ ಫೈರ್ ಮಾಡಿದ್ರೆ ಕಷ್ಟ. ಹೀಗಾಗಿ ಇಂದು ಶೋಧ ಕಾರ್ಯವನ್ನು ಪೊಲೀಸರು ಸ್ಥಗಿತಗೊಳಿಸಿದ್ದಾರೆ. ಆರೋಪಿ & ಬಾಲಕಿಯ ರುಂಡ ಹುಡುಕಾಟದ ಕಾರ್ಯ ನಾಳೆಗೆ ಮುಂದೂಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಡಗು ಬಾಲಕಿ ಬರ್ಬರ ಹತ್ಯೆ ಕೇಸ್‌ಗೆ ರೋಚಕ ಟ್ವಿಸ್ಟ್‌.. ರುಂಡ ಹುಡುಕಾಡಿದ ಪೊಲೀಸರು ಹೇಳಿದ್ದೇನು?

https://newsfirstlive.com/wp-content/uploads/2024/05/Kodagu-murder-2.jpg

Load More