/newsfirstlive-kannada/media/post_attachments/wp-content/uploads/2025/07/Chikkamagalore-rain.jpg)
ಭಾರೀ ಮಳೆ ಕರ್ನಾಟಕವನ್ನ ಇನ್ನಿಲ್ಲದಂತೆ ಕಾಡ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಕನ್ಫರ್ಮ್ ಆಗಿದೆ. ಇನ್ನೂ ಮಳೆ ಸೃಷ್ಟಿಸಿರೋ ಅವಾಂತರದ ಬಗ್ಗೆ ಒಂದು ಅಪ್ಡೇಟ್ ಇಲ್ಲಿದೆ.
ಇದನ್ನೂ ಓದಿ: ದರ್ಶನ್, ಪವಿತ್ರಾ ಗೌಡ ಬೇಲ್ ಕೇಸ್; ಇಂದು ಸುಪ್ರೀಂಕೋರ್ಟ್ನಲ್ಲಿ ಏನೆಲ್ಲಾ ಆಯ್ತು..? ಫುಲ್ ಡಿಟೇಲ್ಸ್!
ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಪಲ್ಟಿ!
ಮಲೆನಾಡಲ್ಲಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಪಿಕಪ್ ವಾಹನ ಬಿದ್ದ ಪರಿಣಾಮ ಯುವಕ ಸಾ*ವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ. ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಿಕಪ್ ವಾಹನ ಸಮೇತ ನದಿಗೆ ಬಿದ್ದು ಗಣಪತಿಕಟ್ಟೆ ನಿವಾಸಿ 23 ವರ್ಷದ ಶಮಂತ್ ಯುವಕ ಮೃ*ತಪಟ್ಟಿದ್ದಾನೆ. ಚಾಲಕ ಶಮಂತ್ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿರುವುದರ ಜೊತೆಗೆ ಪರಿಶೀಲನೆಗಳು ಕೂಡ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ಇಂದು ರಜೆ
ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಇವತ್ತು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕೆ.ಜಿ ಹಳ್ಳಿ ಗಲಭೆ ಪ್ರಕರಣ: ಮೂವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ವಿಶೇಷ ನ್ಯಾಯಾಲಯ
ಕೊಡಗು ಜಿಲ್ಲೆಯಲ್ಲೆಗೂ ತಟ್ಟಿದ ಮಳೆ ಎಫೆಕ್ಟ್.. ಇವತ್ತು ರಜೆ
ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗ್ತಿದೆ. ಹೀಗಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇವತ್ತೊಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಆದೇಶವನ್ನ ಹೊರಡಿಸಿದ್ದಾರೆ.
ಮಳೆ ಅಬ್ಬರ.. ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ!
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಸಾಗರ, ಹೊಸನಗರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ದಂಡಾಧಿಕಾರಿಗಳು ಆದೇಶ ಹೊಡಿಸಿದ್ದಾರೆ.
ಸಂಸೆ ಗ್ರಾಮ ಪಂಚಾಯಿತಿ ವಿರುದ್ಧ ತಿರುಗು ಬಿದ್ದ ಗ್ರಾಮಸ್ಥರು
ಚಿಕ್ಕಮಗಳೂರು ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿಯ ಎಸ್.ಕೆ.ಮೇಗಲ್ ಗ್ರಾಮಸ್ಥರು ಗ್ರಾಮ ಪಂಚಾಯತಿ ವಿರುದ್ಧ ಸಿಡಿದೆದ್ದಿದ್ದಾರೆ. ಎಸ್.ಕೆ.ಮೇಗಲ್‌ನಿಂದ ಕೋಣೆಗೋಡು ಹರಿಜನ ಕಾಲೋನಿ, ಹಡ್ಲುಮನೆ ಮತ್ತು ಬಿಳಾಲ್‌ಗೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ವರ್ಷಗಳಿಂದ ಕೆಟ್ಟು ಬಿದ್ದಿವೆ. ಅದನ್ನ ದುರಸ್ತಿ ಮಾಡಿ.. ಇದರಿಂದ ವಯೋವೃದ್ಧರು, ಗರ್ಭಿಣಿ ಸ್ತ್ರೀಯರು ಸಮಸ್ಯೆ ಅನುಭವಿಸುವಂತಾಗಿದೆ. ಇಲ್ಲ ಚುನಾವಣೆ ಬಹಿಷ್ಕಾರ ಮಾಡ್ತವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದನ್ನೂ ಓದಿ: ಪ್ರೇಮಿಗಳಿಗೆ ಶುಭದಿನ, ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಎದುರಾಗುತ್ತೆ.. ಇಲ್ಲಿದೆ ಇಂದಿನ ಭವಿಷ್ಯ
ಕಿಷ್ಕಿಂಧೆ ಭಾಗದ ಬೆಟ್ಟಗಳಲ್ಲಿ ಸಣ್ಣ ಸಣ್ಣ ಜಲಪಾತ ಸೃಷ್ಟಿ
ಕೊಪ್ಪಳ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಪ್ರವಾಸಿಗರ ನೆಚ್ಚಿನ ತಾಣ ಗಂಗಾವತಿ ತಾಲೂಕಿನ ಆನೆಗೊಂದಿ-ಚಿಕ್ಕರಾಂಪುರ ಬಳಿ ಇರೋ ಹನುಮ ಜನ್ಮಸ್ಥಳ ಅಂಜನಾದ್ರಿಯ ಕಿಷ್ಕಿಂಧೆ ಭಾಗದ ಬೆಟ್ಟಗಳಲ್ಲಿ ಸಣ್ಣ ಸಣ್ಣ ಜಲಪಾತ ಸೃಷ್ಟಿಯಾಗಿವೆ.
ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದೆ. ಮುಂಜಾನೆಯಿಂದಲೇ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ. ಕಡಲ ತೀರದಲ್ಲಿ ಗಂಟೆಗೆ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸ್ತಿದ್ದು, ಪ್ರವಾಸಿಗರಿಗೆ ಪ್ರವೇಶ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: ಫ್ಯಾನ್ಸ್ಗೆ ಸರ್ಪ್ರೈಸ್ ಕೊಟ್ಟ ರಿಷಭ್ ಪಂತ್.. ಮತ್ತೊಮ್ಮೆ ಅಭಿಮಾನಿಗಳ ಹೃದಯಗೆದ್ದ ಸ್ಟಾರ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ