newsfirstkannada.com

ಶರಣಾಗತಿ ಒಂದೇ ಉಳಿದಿರೋ ದಾರಿ? ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ರೆಡಿ; ಯಾವಾಗ?

Share :

Published May 5, 2024 at 3:36pm

    ಮತ್ತೋರ್ವ ಸಂತ್ರಸ್ಥೆ ನೀಡಿರುವ ಹೇಳಿಕೆಯಿಂದ ಮತ್ತೊಂದು ಕೇಸ್?

    ಪ್ರಜ್ವಲ್ ರೇವಣ್ಣನನ್ನು ಬಂಧಿಸೋಕೆ ಎಸ್​ಐಟಿ ತಂಡ ಹುಡುಕಾಟ

    ಜ್ವಲ್​ಗೆ ರೆಡ್ ಕಾರ್ನರ್ ನೋಟಿಸ್ ನೀಡಲು ಸಿ‌ಬಿಐಗೆ‌ SIT ಮನವಿ

ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಮೈಸೂರಿನ ಕೆ.ಆರ್ ನಗರದಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆ ಹೇಳಿಕೆ ನೀಡಿದ್ದು, ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರೆ ಅನ್ನೋ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಅಪಹರಣಕ್ಕೆ ಒಳಗಾಗಿದ್ದ ಮಹಿಳೆ ನೀಡಿರುವ ಹೇಳಿಕೆಯ ಅನ್ವಯ ಸಿಐಡಿ ಠಾಣೆಯಲ್ಲಿ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಈ ಹಿಂದೆ ಸಂತ್ರಸ್ಥ ಮಹಿಳೆ ನೀಡಿದ ದೂರಿನನ್ವಯ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈಗ ಮತ್ತೋರ್ವ ಸಂತ್ರಸ್ಥೆ ನೀಡಿರುವ ಹೇಳಿಕೆಯಿಂದ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ದೂರಿನ ದೂರು ದಾಖಲಾಗುತ್ತಿರುವುದರಿಂದ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್​ಐಟಿ ಮುಂದೆ ಶರಣಾಗೋದು ಒಂದೇ ದಾರಿ ಉಳಿದಿದೆ.

ಶರಣಾಗ್ತಾರಾ ಪ್ರಜ್ವಲ್ ರೇವಣ್ಣ?
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ರೇಪ್ ಕೇಸ್ ದಾಖಲಾಗಿದೆ. SIT ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ. ಎಸ್‌ಐಟಿ ನೋಟಿಸ್ ಜಾರಿಯಾದ ಮೇಲೆ ಪ್ರಜ್ವಲ್ ರೇವಣ್ಣ ಅವರು 7 ದಿನ‌ಗಳ ಕಾಲಾವಕಾಶ ಕೇಳಿದ್ದಾರೆ. ಈಗಾಗ್ಲೆ ಕೆ.ಆರ್ ನಗರ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಬಂಧನವಾಗಿದೆ. ಇದೀಗ ಪ್ರಜ್ವಲ್ ರೇವಣ್ಣನನ್ನು ಬಂಧಿಸೋಕೆ ಎಸ್​ಐಟಿ ತಂಡ ಹುಡುಕಾಟ ನಡೆಸಿದೆ.

ಸಿಐಡಿ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ‌ಮೇಲೆ‌ ನಿರಂತರ ಅತ್ಯಾಚಾರ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಪ್ರಜ್ವಲ್​ಗೆ ರೆಡ್ ಕಾರ್ನರ್ ನೋಟಿಸ್ ನೀಡಲು ಸಿ‌ಬಿಐಗೆ‌ SIT ಮನವಿ ಮಾಡಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7ರಂದು ಮತದಾನ ನಡೆಯಲಿದೆ. ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಬಂಧನ ಆದ್ರೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಅರೆಸ್ಟ್ ಆದರು ಅನ್ನೋದು ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಲಿದೆ. ಇದೇ ಕಾರಣಕ್ಕೆ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ 2ನೇ ಹಂತದ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ಶರಣಾಗೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶರಣಾಗತಿ ಒಂದೇ ಉಳಿದಿರೋ ದಾರಿ? ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ರೆಡಿ; ಯಾವಾಗ?

https://newsfirstlive.com/wp-content/uploads/2024/05/prajwal-revanna6-1.jpg

Load More