/newsfirstlive-kannada/media/post_attachments/wp-content/uploads/2025/04/darshan2.jpg)
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಬಿ.ಸುರೇಶ್, ನಿರ್ಮಾಪಕಿ ಶೈಲಜಾ ನಾಗ್ ಅವರ ಮಗಳು ಚಂದನಾ ಎಸ್. ನಾಗ್ ಭರತನಾಟ್ಯ ರಂಗಪ್ರವೇಶ ಮಾಡಿದ್ದಾರೆ.
ಇದನ್ನೂ ಓದಿ:ಮದ್ವೆಗೆ 8 ದಿನ ಬಾಕಿ ಇರುವಾಗ ಮಾಜಿ ಗೆಳೆಯ ಬ್ಲಾಕ್ಮೇಲ್.. ನೋವಲ್ಲೇ ಜೀವಬಿಟ್ಟ ದೈಹಿಕ ಶಿಕ್ಷಕಿ..
ಸ್ನೇಹಾ ಕಪ್ಪಣ್ಣ ಅವರ ಭ್ರಮರಿ ನಾಟ್ಯಶಾಲೆಯಲ್ಲಿ ಕಲಿಯುತ್ತಿರುವ ಚಂದನಾ, ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ಎಡಿಎ ರಂಗಮಂದಿರದಲ್ಲಿ ರಂಗಪ್ರವೇಶ ಮಾಡಿದ್ದಾರೆ.
ಇದನ್ನೂ ಓದಿ:ಮಹಾನಟಿ ಗಗನಾ ಕೊಟ್ಟ ಸರ್ಪ್ರೈಸ್ಗೆ ವೇದಿಕೆ ಮೇಲೆ ಡ್ರೋನ್ ಪ್ರತಾಪ್ ಕಣ್ಣೀರು.. VIDEO
ಗುರು ಭಾನುಮತಿ ಅವರ ಬಳಿ ಸುಮಾರು 10 ರಿಂದ 15 ವರ್ಷಗಳ ಕಾಲ ಚಂದನಾ ಭರತನಾಟ್ಯ ಕಲಿತಿದ್ದು, ಗುರು ಸ್ನೇಹಾ ಕಪ್ಪಣ್ಣ ಅವರ ಬಳಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.
View this post on Instagram
ಈಗಾಗಲೇ ಶೈಲಜಾ ನಾಗ್ ಮತ್ತು ಬಿ. ಸುರೇಶ್ ಅವರ ಪುತ್ರಿ ಚಂದನಾ ನಾಗ್ ನಟಿ, ಬರಹಗಾರ್ತಿ, ನಿರ್ದೇಶಕಿ ಹಾಗೂ ನಾಟಕ ಕಲಾವಿದೆ ಆಗಿ ಗುರುತಿಸಿಕೊಂಡಿರುವ ಗುರುತಿಸಿಕೊಂಡಿದ್ದಾರೆ.
ಇನ್ನೂ, ಇದೇ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಅವರು ಆಗಮಿಸಿ ಚಂದನಾಗೆ ಶುಭಕೋರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ