ಕರ್ನಾಟಕ ಬಂದ್​​ಗೆ ಯಾವೆಲ್ಲ ಜಿಲ್ಲೆಗಳಲ್ಲಿ ಬೆಂಬಲ..? ಎಲ್ಲೆಲ್ಲಿ ಪ್ರತಿಭಟನೆ ನಡೆಯುತ್ತಿದೆ..?

author-image
Veena Gangani
Updated On
ಬೆಂಗಳೂರಲ್ಲಿ 11 ಗಂಟೆಗೆ ಬೃಹತ್ ಪ್ರತಿಭಟನೆ.. ಟ್ರಾಫಿಕ್ ಸಮಸ್ಯೆ ಆಗಬಹುದು ಎಚ್ಚರ..!
Advertisment
  • ಮರಾಠಿ ಪುಂಡರ ಪುಂಡಾಟ ಖಂಡಿಸಿ ಸಂಪೂರ್ಣ ಕರ್ನಾಟಕ ಬಂದ್​
  • ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ಕರವೇ ಸ್ವಾಭಿಮಾನಿ ಬಣ ಸಾಥ್
  • ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳ್ಳಗ್ಗೆ ಪ್ರತಿಭಟನೆ

ದಾವಣಗೆರೆ: ಇಂದು ಕರ್ನಾಟಕ ಬಂದ್. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಇರಲಿದೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​ ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಅವರಿಂದ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ:ನಾಳೆ ಓಲಾ, ಉಬರ್ ರಸ್ತೆಗೆ ಇಳಿಯಲ್ಲ.. ಕರ್ನಾಟಕ ಬಂದ್​ಗೆ ಯಾರೆಲ್ಲ ಬೆಂಬಲ ಕೊಟ್ಟವ್ರೆ..?

publive-image

ದಾವಣಗೆರೆಯ ಸಂಗೋಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನಾಕಾರರು ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದು ಕಡೆ ಮೈಸೂರಿನಲ್ಲೂ ಕನ್ನಡಪರ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ಸಿಲಿಕಾನ್​ ಸಿಟಿ ಬೆಂಗಳೂರು ಹಾಗೂ ಹುಬ್ಬಳ್ಳಿ ಎಂದಿನಂತೆ ಜನಸಂಚಾರ ಮುಂದುವರೆದಿದೆ.

publive-image

ಇತ್ತ ಚಿಕ್ಕಬಳ್ಳಾಪುರದಲ್ಲೂ ಕರ್ನಾಟಕ ಬಂದ್ ಬೆಂಬಲಿಸಿ ಬೆಳ್ಳಂಬೆಳಗ್ಗೆ ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಸೇನೆ, ಕ.ರ.ವೆ ಶಿವರಾಮೆ ಗೌಡ ಬಣದ ಮುಖಂಡರುಗಳು ಬಂದ್​ಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment