newsfirstkannada.com

Video: ಜಲಪಾತ ನೋಡುತ್ತಿದ್ದಂತೆ ಕಾಲು ಜಾರಿ ನೀರಿಗೆ ಬಿದ್ದ ಯುವಕ ಕಣ್ಮರೆ; ಅಗ್ನಿಶಾಮಕ ದಳದಿಂದ ಹುಡುಕಾಟ

Share :

24-07-2023

  ಜಲಪಾತ ವೀಕ್ಷಿಸುತ್ತಿದ್ದ ಯುವಕ ಕಾಲು ಜಾರಿ ನೀರಿಗೆ

  ಮೊಬೈಲ್​ನಲ್ಲಿ ಸೆರೆಯಾಯ್ತು ನೀರು ಪಾಲಾದ ಯುವಕನ ದೃಶ್ಯ

  ಅಗ್ನಿಶಾಮಕ ದಳದಿಂದ ನೀರಿಗೆ ಬಿದ್ದ ಹುಡುಗನಿಗಾಗಿ ಹುಡುಕಾಟ

ಉಡುಪಿ: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬಾತ ನೀರು ಪಾಲಾಗಿದ್ದಾನೆ. ಶರತ್​ ನೀರಿಗೆ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಶರತ್ ಕುಮಾರ್ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ. ಈ ವೇಳೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ. ಜಲಪಾತ ನೊಡುತ್ತಿದ್ದಂತೆಯೇ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಸದ್ಯ ಯುವಕನ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದೆ.

ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಜಲಪಾತ ನೋಡುತ್ತಿದ್ದಂತೆ ಕಾಲು ಜಾರಿ ನೀರಿಗೆ ಬಿದ್ದ ಯುವಕ ಕಣ್ಮರೆ; ಅಗ್ನಿಶಾಮಕ ದಳದಿಂದ ಹುಡುಕಾಟ

https://newsfirstlive.com/wp-content/uploads/2023/07/Arishina-Gundi.jpg

Load More