/newsfirstlive-kannada/media/post_attachments/wp-content/uploads/2024/07/Bhole-baba.jpg)
ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆಯುತ್ತಿರೋ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಇನ್ನು, ಈ ಸಂಬಂಧ ಮಾತಾಡಿರೋ ಸಿಕಂದರ ರಾವ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಆಶೀಶ್ ಕುಮಾರ್ ಅವರು, ಇದುವರೆಗೆ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಭಕ್ತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ನೂರಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುತ್ತಲೇ ಇದೆ ಎಂದಿದ್ದಾರೆ. ಜತೆಗೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಯಾರು ಈ ಭೋಲೆ ಬಾಬಾ..?
ಭೋಲೆ ಬಾಬಾ ಉತ್ತರ ಪ್ರದೇಶದ ಇಟಹಾ ಜಿಲ್ಲೆಯ ಪಿಟಲಿ ತಾಲ್ಲೂಕಿನ ಬಹದ್ದೂರ್ ಎಂಬ ಗ್ರಾಮಕ್ಕೆ ಸೇರಿದವರು. ಇವರು ಸ್ವಯಂ ಘೋಷಿತ ದೇವ ಮಾನವ. ನಾರಾಯಣ್ ಸಕಾರ್ ಹರಿ ಅಲಿಯಾಸ್ ಸಕಾರ್ ವಿಶ್ವ ಹರಿ ಅಲಿಯಾಸ್ ಭೋಲೆ ಬಾಬಾ ಎಂದು ಖ್ಯಾತಿ ಪಡೆದವರು. ಈ ಹಿಂದೆ ಇಂಟಲಿಜೆನ್ಸ್ ಬ್ಯೂರೋದಲ್ಲಿ ಅಧಿಕಾರಿಯಾಗಿದ್ದ ಭೋಲೆ ಬಾಬಾ 26 ವರ್ಷಗಳ ಹಿಂದೆಯೇ ಈ ಸರ್ಕಾರಿ ಉದ್ಯೋಗ ತ್ಯಜಿಸಿದ. ಬಳಿಕ ಧಾರ್ಮಿಕ ಗುರುವಾದ ಇವರು ಪ್ರತಿ ಮಂಗಳವಾರ ಉತ್ತರ ಪ್ರದೇಶ, ರಾಜಸ್ಥಾನ ಸೇರಿ ವಿವಿಧೆಡೆ ಸತ್ಸಂಗ ನಡೆಸುತ್ತಿದ್ದರು. ಪ್ರತಿ ಬಾರಿಯೂ ಇವರ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರುತ್ತಿದ್ದರು.
ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ.. ಭೋಲೆ ಬಾಬಾ ಪ್ರವಚನ ಕೇಳಲು ಬಂದಿದ್ದ 80ಕ್ಕೂ ಹೆಚ್ಚು ಭಕ್ತರ ಸಾವು; ಆಗಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ