newsfirstkannada.com

ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆದ ಹೈಕಮಾಂಡ್‌; ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಯಾರು?

Share :

Published March 30, 2024 at 12:14pm

    ಬೆಂಗಳೂರಿನ ಯುವ ನಾಯಕ, ಮಾಜಿ ಮೇಯರ್ ಪುತ್ರ ಗೌತಮ್‌

    ಕೆ.ಹೆಚ್‌ ಮುನಿಯಪ್ಪ, ರಮೇಶ್ ಕುಮಾರ್ ಎರಡೂ ಬಣಕ್ಕೆ ಸಂದೇಶ

    ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಬೇಕು ಇಲ್ಲದಿದ್ದರೆ ಸಚಿವ ಸ್ಥಾನಕ್ಕೆ ಕುತ್ತು!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಗ್ಗಾಂಟಾಗಿದ್ದ ಕೋಲಾರ ಟಿಕೆಟ್ ಹಂಚಿಕೆ ಬಿಕ್ಕಟ್ಟನ್ನು ಕಾಂಗ್ರೆಸ್ ಹೈಕಮಾಂಡ್ ಇಕ್ಕಟ್ಟಿನಲ್ಲೇ ಬಗೆಹರಿಸಿದೆ. ಸಚಿವ ಕೆ.ಹೆಚ್‌ ಮುನಿಯಪ್ಪ ಹಾಗೂ ಮಾಜಿ ಸಚಿವ ರಮೇಶ್ ಕುಮಾರ್ ಎರಡೂ ಬಣಕ್ಕೆ ಮಣೆ ಹಾಕದೆ 3ನೇ ವ್ಯಕ್ತಿಗೆ ಕೋಲಾರ ಟಿಕೆಟ್ ಘೋಷಣೆ ಮಾಡಲಾಗಿದೆ.

ಯಾರು ಈ ಕೆ.ವಿ ಗೌತಮ್?
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರು ಮೂಲತಃ ಬೆಂಗಳೂರಿನವರು. ಗೌತಮ್ ತಂದೆ ವಿಜಯ್ ಕುಮಾರ್ ಅವರು ಬೆಂಗಳೂರಿನ ಮೇಯರ್ ಆಗಿದ್ದರು. ಗೌತಮ್ ಅವರು NSUIನಿಂದ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

ಕೆ.ವಿ ಗೌತಮ್ ಅವರು NSUI ಬೆಂಗಳೂರು ನಗರ ಕಾರ್ಯದರ್ಶಿ ಆಗಿದ್ದರು. ನಂತರ ಯೂತ್‌ ಕಾಂಗ್ರೆಸ್ ಬೆಂಗಳೂರು ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಚಿವ ಕೃಷ್ಣ ಭೈರೇಗೌಡರು ರಾಷ್ಟ್ರೀಯ ಯೂತ್‌ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವೇಳೆ ರಾಜ್ಯ ಯೂತ್‌ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ಗೌತಮ್ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: 3ನೇಯವರಿಗೆ ಟಿಕೆಟ್ ಕೊಟ್ಟು ಕೈ ತೊಳೆದುಕೊಂಡ್ರೆ.. ಕಾಂಗ್ರೆಸ್‌ ನಾಯಕರಿಗೆ ಕೆ.ಹೆಚ್ ಮುನಿಯಪ್ಪ ಎಚ್ಚರಿಕೆ 

ಸಚಿವ ದಿನೇಶ್ ಗುಂಡೂರಾವ್ ಅವರ ಅವಧಿಯಲ್ಲೂ ಯೂತ್‌ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಗೌತಮ್‌ ಕೆಲಸ ಮಾಡಿದ್ದಾರೆ. ಡಾ.ಜಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಕೆಪಿಸಿಸಿ ಪದಾಧಿಕಾರಿಯಾಗಿದ್ದರು. ಈಗ ಕಾಂಗ್ರೆಸ್ ಡಿಸಿಸಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. 49 ವರ್ಷದ ಗೌತಮ್ ಅವರು ದಲಿತ ಎಡ ಸಮುದಾಯಕ್ಕೆ ಸೇರಿದವರಾಗಿದ್ದು, ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ ಹೈಕಮಾಂಡ್‌!
ಕೆ.ವಿ ಗೌತಮ್ ಅವರಿಗೆ ಕೋಲಾರ ಟಿಕೆಟ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್‌ ಒಂದೇ ಕಲ್ಲಿನಲ್ಲಿ 2 ಹಕ್ಕಿಯನ್ನು ಹೊಡೆದಿದೆ. ಕೋಲಾರ ಟಿಕೆಟ್‌ಗಾಗಿ ಲಾಬಿ ನಡೆಸಿದ ಕೆ.ಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್‌ 2 ಬಣಕ್ಕೂ ಸ್ಪಷ್ಟ ಸಂದೇಶ ನೀಡಿದ್ದಾರೆ. ಒತ್ತಡ ತಂತ್ರ ಅನುಸರಿಸಿದವರಿಗೆ ಸೆಡ್ಡು ಹೊಡೆದಿರುವ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಬೇಕು. ಇಲ್ಲದೇ ಇದ್ದಲ್ಲಿ ಸಚಿವ ಸ್ಥಾನ ಕಳೆದುಕೊಳ್ಳಬೇಕಾಗಬಹುದೆಂದು ಸಚಿವ ಮುನಿಯಪ್ಪಗೆ ಸಂದೇಶ ಸಿಕ್ಕಿದೆ. ಕೋಲಾರದಲ್ಲಿ ಗೆಲ್ಲುವ ವಾತಾವರಣ ಇದೆ. ಕೆ.ವಿ ಗೌತಮ್ ಅವರಿಗೆ ಹೆಚ್ಚಿನ ಲೀಡ್ ತಂದು ಕೊಡಬೇಕು. ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣ ಮಾಡಬಾರದು. ತಮ್ಮ ಪ್ರತಿಷ್ಠೆ ಪಕ್ಕಕ್ಕಿಟ್ಟು ಒಟ್ಟಾಗಿ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆದ ಹೈಕಮಾಂಡ್‌; ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಯಾರು?

https://newsfirstlive.com/wp-content/uploads/2024/03/KLR_PUTTANNA.jpg

Load More