ಟೀಮ್​ ಇಂಡಿಯಾದ ಹೀನಾಯ ಸೋಲಿಗೆ ಈ ಇಬ್ಬರು ಪ್ರಮುಖ ಕಾರಣ

author-image
Ganesh Nachikethu
Updated On
ಟೀಮ್​ ಇಂಡಿಯಾಗೆ ಮತ್ತೊಂದು ಶಾಕ್​​; ಮೊದಲ ಟೆಸ್ಟ್​ ಮಧ್ಯೆಯೇ ಕೈ ಕೊಟ್ಟ ಸ್ಟಾರ್​ ಪ್ಲೇಯರ್​​
Advertisment
  • 4ನೇ ಮಹತ್ವದ ಟೆಸ್ಟ್​ ಪಂದ್ಯದಲ್ಲಿ ಟೀಮ್​ ಇಂಡಿಯಾಗೆ ಸೋಲು!
  • ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಟೀಮ್​ ಇಂಡಿಯಾ
  • ಟೀಮ್​ ಇಂಡಿಯಾದ ಹೀನಾಯ ಸೋಲಿಗೆ ಕಾರಣವೇನು ಗೊತ್ತಾ?

ಇತ್ತೀಚೆಗೆ ಮೆಲ್ಬೋರ್ನ್‌ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಕ್ಯಾಪ್ಟನ್​​ ರೋಹಿತ್ ಶರ್ಮಾ ನಾಯಕತ್ವದ ಟೀಮ್​ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್‌ಗಳಿಂದ ಸೋಲು ಕಂಡಿದೆ. ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ.

184 ರನ್​ಗಳ ಹೀನಾಯ ಸೋಲು

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್​ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​​ನಲ್ಲಿ 105 ರನ್‌ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್‌ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್‌ ಗಳಿಸಿ 184 ರನ್‌ಗಳಿಂದ ಹೀನಾಯ ಸೋಲು ಕಂಡಿದೆ.

ಭಾರತ ತಂಡ ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಟೀಮ್​ ಇಂಡಿಯಾ ಪರ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಟೀಮ್​ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ರೇಸ್​ನಿಂದ ಹೊರಬಿದ್ದಿದೆ. ಹಾಗಾಗಿ ಟೀಮ್ ಇಂಡಿಯಾ ಸೋಲಿಗೆ ಕಾರಣರಾದ ಪ್ರಮುಖ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.

ಕ್ಯಾಪ್ಟನ್​ ರೋಹಿತ್ ಶರ್ಮಾ

ಭಾರತ ತಂಡದ ಸೋಲಿಗೆ ಪ್ರಮುಖ ಕಾರಣ ಕ್ಯಾಪ್ಟನ್​ ರೋಹಿತ್ ಶರ್ಮಾ. ಇವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೇಳಿಕೊಳ್ಳುವಷ್ಟು ಪ್ರದರ್ಶನ ನೀಡಲಿಲ್ಲ. ಮೆಲ್ಬೋರ್ನ್‌ ಟೆಸ್ಟ್ ಪಂದ್ಯದ 2 ಇನ್ನಿಂಗ್ಸ್​ನಲ್ಲಿ 3 ಮತ್ತು 9 ರನ್ ಗಳಿಸಿ ಟೀಮ್​ ಇಂಡಿಯಾ ಸೋಲಿಗೆ ಕಾರಣರಾದರು. ರೋಹಿತ್​ ತಾನು ಆಡಿರೋ 3 ಪಂದ್ಯಗಳಲ್ಲಿ ಕೇವಲ 31 ರನ್ ಕಲೆ ಹಾಕಿದ್ದಾರೆ.

ವಿರಾಟ್ ಕೊಹ್ಲಿ

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ. ಇವರು ಪರ್ತ್‌ ಶತಕದ ಬಳಿಕ ಶೈನ್​ ಆಗಲೇ ಇಲ್ಲ. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ವಿರಾಟ್ 2 ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 36 ಮತ್ತು 5 ರನ್ ಗಳಿಸಿದರು. ಭಾರತ ಗೆಲ್ಲಲೇಬೇಕಾದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಸೋಲಿಗೆ ಪ್ರಮುಖ ಕಾರಣ.

ಇದನ್ನೂ ಓದಿ:ಸುವರ್ಣಾವಕಾಶ ಕೈ ಚೆಲ್ಲಿದ ಟೀಮ್​ ಇಂಡಿಯಾ; WTC ಫೈನಲ್ಸ್​​ ಪ್ರವೇಶಕ್ಕೆ ಏನು ಮಾಡಬೇಕು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment