/newsfirstlive-kannada/media/post_attachments/wp-content/uploads/2024/07/Kohli_Rohit_RCB.jpg)
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ತಂಡ ತೊರೆಯೋದು ಬಹುತೇಕ ಪಕ್ಕಾ ಆಗಿದೆ. ಮುಂಬೈ ಇಂಡಿಯನ್ಸ್ ತೊರೆದು ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಲಿದ್ದಾರೆ. ಫಾಫ್ ಡುಪ್ಲೆಸಿಸ್ ಬಳಿಕ ರೋಹಿತ್ ಶರ್ಮಾ ಆರ್ಸಿಬಿ ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ರೋಹಿತ್ ಶರ್ಮಾ ಅವರನ್ನು ಆರ್ಸಿಬಿಗೆ ಕರೆ ತರೋ ಪ್ಲಾನ್ ಯಾರದ್ದು ಅನ್ನೋ ಚರ್ಚೆ ಶುರುವಾಗಿದೆ.
ಇನ್ನು, ಟಿ20 ವಿಶ್ವಕಪ್ಗೆ ಭಾರತ ತಂಡದ ಪರ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೋಡಿ ಓಪನಿಂಗ್ ಮಾಡಿತು. ಇದು ಅಷ್ಟರಮಟ್ಟಿಗೆ ವರ್ಕೌಟ್ ಆಗಿಲಿಲ್ಲ ಆದ್ರೂ ಜನ ಮಾತ್ರ ಸಖತ್ ಎಂಜಾಯ್ ಮಾಡಿದ್ರು. ಕ್ಯಾಪ್ಟನ್ ರೋಹಿತ್ ಶರ್ಮಾ ಕೈಕೊಟ್ಟ ಮಹತ್ವದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಬೆನ್ನಿಗೆ ನಿಂತು ವಿಶ್ವಕಪ್ ಗೆಲ್ಲಿಸಿಕೊಟ್ರು. ರೋಹಿತ್ ಆಡದಿದ್ರೆ ಕೊಹ್ಲಿ, ಕೊಹ್ಲಿ ಆಡದಿದ್ರೆ ರೋಹಿತ್. ಇಬ್ಬರಲ್ಲಿ ಒಬ್ಬರು ಮಾತ್ರ ಓಪನರ್ ಆಗಿ ಯಾವುದೇ ತಂಡದಲ್ಲಿ ಇರಲಿ ಮಿಂಚುತ್ತಾರೆ ಅನ್ನೋದಕ್ಕೆ ಟಿ20 ವಿಶ್ವಕಪ್ ಸಾಕ್ಷಿ. ಹಾಗಾಗಿ 2025ರ ಐಪಿಎಲ್ ಸೀಸನ್ಗೆ ಕೊಹ್ಲಿ ಅವರೇ ರೋಹಿತ್ ಶರ್ಮಾ ಅವರನ್ನು ಆರ್ಸಿಬಿ ಕ್ಯಾಪ್ಟನ್ ಮಾಡಿ ಎಂಬ ಪ್ರಸ್ತಾಪ ಇಟ್ಟಿದ್ದಾರಂತೆ.
ವಿಶ್ವಕಪ್ ಗೆದ್ದ ಕೂಡಲೇ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ರೂ ತಾನು ಐಪಿಎಲ್ ಆಡೋದಾಗಿ ರೋಹಿತ್ ಹೇಳಿದ್ರು. ಆ್ಯಕ್ಷನ್ನಲ್ಲಿ ಆರ್ಸಿಬಿ ರೋಹಿತ್ ಶರ್ಮಾ ಅವರನ್ನು ಖರೀದಿ ಮಾಡಲಿ. ರೋಹಿತ್ ಕ್ಯಾಪ್ಟನ್ ಆಗಲಿ, ಕೊಹ್ಲಿ ಆರ್ಸಿಬಿ ಪರ ಚೆನ್ನಾಗಿ ಆಡಿ ಕಪ್ ಗೆಲ್ಲಿಸಲಿ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಆರ್ಸಿಬಿ ಫ್ರಾಂಚೈಸಿ ಕೂಡ ಒಂದು ವೇಳೆ ಕೊಹ್ಲಿ ಕ್ಯಾಪ್ಟನ್ ಆಗಲು ನಿರಾಕರಣೆ ಮಾಡಿದ್ರೆ ರೋಹಿತ್ ಶರ್ಮಾ ಅವರನ್ನು ಬೆಂಗಳೂರು ತಂಡಕ್ಕೆ ಕರೆ ತರೋ ಸಾಧ್ಯತೆಗಳು ಇವೆ.
ಇದನ್ನೂ ಓದಿ:ವರ್ಲ್ಡ್ ಕಪ್ ವಿನ್ನಿಂಗ್ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಆರ್ಸಿಬಿಯಿಂದ ವಿಶೇಷ ಪೋಸ್ಟ್.. ಏನದು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ