ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಪ್ಲಾನ್
ಬಿಎಸ್‍ವೈ ಮಾತಿಗೆ ಮಣೆ ಹಾಕುತ್ತಾ ಹೈಕಮಾಂಡ್?
ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರು ಇವರೇ ನೋಡಿ!
ಬೆಂಗಳೂರು: ಅನಿರೀಕ್ಷಿತ ಸೋಲಿನಿಂದ ಕಂಗೆಟ್ಟಿರುವ ರಾಜ್ಯ ಬಿಜೆಪಿ ಪಾಳಯ ಲೋಕಸಭಾ ಚುನಾವಣೆಗೆ ತಂತ್ರ ಹೆಣೆಯುತ್ತಿದೆ. ಆದ್ರೆ ಕೇಸರಿ ಸೈನ್ಯವನ್ನು ಸಮರ್ಥವಾಗಿ ಮುನ್ನೆಡೆಸುವ ಸೇನಾಪತಿಯ ಆಯ್ಕೆಯೇ ಬಿಜೆಪಿಗೆ ಕಗ್ಗಂಟಾಗಿದೆ. ಈ ನಡುವೆ ಪದಾಧಿಕಾರಿಗಳ ಪಟ್ಟಿಯಲ್ಲಿ ಸಿ.ಟಿ ರವಿ ಕೈ ಬಿಟ್ಟಿರೋದು ಕುತೂಹಲ ಕೆರಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಸಿ.ಟಿ ರವಿಗೆ ಕಟ್ಟುತ್ತಾರಾ ಅನ್ನೋ ಮಾತು ಕೇಳಿ ಬಂದಿದೆ.
ಒಂದೆಡೆ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಗೊಂದಲ. ಮತ್ತೊಂದೆಡೆ ರಾಜ್ಯಾಧ್ಯಕ್ಷರ ಆಯ್ಕೆ ಹೈಕಮಾಂಡ್ಗೆ ತಲೆನೋವಾಗಿದೆ. ಈ ಮಧ್ಯೆ ನೇರ, ನಿಷ್ಠುರ ನುಡಿಗಳ ನಾಯಕ ಸಿ.ಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್!
ಲೋಕಸಭಾ ಚುನಾವಣೆ ಜೊತೆಗೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಲ್ಲಿ ಆಡಳಿತಾತ್ಮಕ ಬದಲಾವಣೆಗಳಾಗುತ್ತಿವೆ. ಪಕ್ಷದಲ್ಲಿ ಮೇಜರ್ ಸರ್ಜರಿ ನಡೆದಿದೆ. ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟವಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್ ಸಂತೋಷ್ರನ್ನೇ ಮುಂದುವರಿಸಲಾಗಿದೆ. ತೆಲಂಗಾಣ ಬಿಜೆಪಿ ಮಾಜಿ ಅಧ್ಯಕ್ಷ ಬಂಡಿ ಸಂಜಯ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ನಲ್ಲಿರುವ ಸಿ.ಟಿ ರವಿ ಹೆಸರನ್ನು ಹೈಕಮಾಂಡ್ ಕೈಬಿಟ್ಟಿರೋದು ತೀವ್ರ ಕುತೂಹಲಕ್ಕೆ ಕಾರಣ ಆಗಿದೆ. ಹಿಂದೆ ತೆಲಂಗಾಣ ಅಧ್ಯಕ್ಷರಾಗಿದ್ದ ಬಂಡಿ ಸಂಜಯ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಲಾಗಿತ್ತು. ಈಗ ಸಿ.ಟಿ ರವಿಗೂ ಕೊಕ್ ನೀಡಲಾಗಿದ್ದು, ಇವರು ರಾಜ್ಯ ಬಿಜೆಪಿ ಅಧ್ಯಕ್ಷರಾಗ್ತಾರಾ ಅನ್ನೋ ಲೆಕ್ಕಾಚಾರಗಳು ಶುರುವಾಗಿವೆ.
ಇನ್ನು ಕಳೆದ ವಾರವಷ್ಟೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರನ್ನು ಸಿ.ಟಿ ರವಿ ಭೇಟಿಯಾಗಿದ್ದರು. ಬಿಎಸ್‍ವೈ ಆಶೀರ್ವಾದ ಪಡೆದು, ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದರು. ಆದ್ರೆ ಇದು ಸೌಹಾರ್ದಯುತ ಭೇಟಿಯಷ್ಟೆ ಎಂದಿದ್ದರು.
ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿ.ಟಿ ರವಿ ಹಾಗೂ ವಿಪಕ್ಷ ನಾಯಕನ ಹುದ್ದೆಗೆ ಬಸನಗೌಡ ಪಾಟೀಲ್ ಯತ್ನಾಳ್ ಹೆಸರನ್ನು ಬಿಜೆಪಿ ಪರಿಗಣಿಸಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದರು. ಇದರ ಬೆನ್ನಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೊಕ್ನೀಡಲಾಗಿದ್ದು, ದೇವೇಗೌಡರ ಭವಿಷ್ಯ ನಿಜವಾಗುತ್ತಾ ಅನ್ನೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ಮೂರು ಹುದ್ದೆಗಳು ನಿರ್ಧಾರವಾಗುವ ಸಾಧ್ಯತೆ ಇದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯದ ಮುಖಂಡರಿಗೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಸಮುದಾಯದ ಮುಖಂಡರನ್ನು ಹಾಗೂ ಪರಿಷತ್ ವಿಪಕ್ಷ ನಾಯಕನ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.
ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಲ್ವಾ?
ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದರೂ ಸಿ.ಟಿ ರವಿಗೆ ಈ ಬಾರಿ ತಮ್ಮ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನೊಂದೆಡೆ ಸಿ.ಟಿ ರವಿ ಕಾರ್ಯವೈಖರಿ ಹೈಕಮಾಂಡ್ಗೆ ಸಮಾಧಾನ ತಂದಿಲ್ಲ. ಕಾರಣ ಕರ್ನಾಟಕದಲ್ಲೇ ಬಿಜೆಪಿ ಅಧಿಕಾರ ಕಳೆದುಕೊಂಡರೆ ತಮಿಳುನಾಡಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಆಗಿಲ್ಲ. ಪಕ್ಷ ಸಂಘಟನೆಯೇ ಈ ಹುದ್ದೆಯ ಮುಖ್ಯ ಉದ್ದೇಶ ಮತ್ತು ಗುರಿಯಾಗಿದೆ. 2024ರ ಲೋಕಸಭಾ ಚುನಾವಣೆಗೆ ಯಡವಟ್ಟಾಗಬಾರದು, ಇಡೀ ದೇಶದಲ್ಲಿ ಪಕ್ಷ ಸಂಘಟನೆ ಆಗಬೇಕು. ಹೀಗಾಗಿ ಸಿ.ಟಿ ರವಿಗೆ ಸ್ಥಾನದಿಂದ ಕೊಕ್ ನೀಡಲಾಗಿದೆ ಎನ್ನಲಾಗ್ತಿದೆ. ಹೀಗಾಗಿ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗೋದೂ ಡೌಟ್ ಎನ್ನಲಾಗ್ತಿದೆ.
ಕಳೆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರಾವಾಧಿ ಮುಗಿದಿದ್ದು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಆರ್. ಅಶೋಕ್, ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್, ವಿಜಯೇಂದ್ರ ಹಾಗೂ ಶೋಭಾ ಕರಂದ್ಲಾಜೆ ಕೂಡ ರಾಜ್ಯಾಧ್ಯಕ್ಷರ ರೇಸ್ನಲ್ಲಿರುವ ಮಾತು ಕೇಳಿ ಬಂದಿದೆ.
ಒಟ್ಟಾರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ವಿಚಾರ ಹಲವು ಆಯಾಮಗಳಲ್ಲಿ ಚರ್ಚೆ ಆಗ್ತಿದೆ. ಒಂದು ವೇಳೆ ಅಧ್ಯಕ್ಷ ಸ್ಥಾನ ಸಿಗದಿದ್ರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಷ್ಟ್ರ ರಾಜಕಾರಣಕ್ಕೆ ಹೈಕಮಾಂಡ್ ಕರೆಸಿಕೊಳ್ಳಬಹುದು. ಬಿಜೆಪಿ ಹೈಕಮಾಂಡ್ ಲೆಕ್ಕಾಚಾರಗಳು ಏನೇನು ಅನ್ನೋದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ