newsfirstkannada.com

ಹೈಕಮಾಂಡ್​​ ವಿಜಯೇಂದ್ರಗೆ ಮಣೆ ಹಾಕಲು ಕಾರಣವೇನು..? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇಕೆ..?

Share :

10-11-2023

    ಮಾಜಿ ಸಿಎಂ ಬಿಎಸ್​​ವೈ ಪುತ್ರ ವಿಜಯೇಂದ್ರಗೆ ಹೈಕಮಾಂಡ್​ ಮಣೆ

    ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ಮಾಡಿ ಆದೇಶ..!

    ಬಿ.ವೈ ವಿಜಯೇಂದ್ರಗೆ ಹೈಕಮಾಂಡ್​​ ಮಣೆ ಹಾಕಲು ಕಾರಣವೇನು?

ಬೆಂಗಳೂರು: ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಈ ಸೋಲಿಗೆ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಎಂಬ ಮಾತುಗಳು ಕೇಳಿ ಬಂದಿದ್ದವು. ಹಲವು ಬಿಜೆಪಿ ನಾಯಕರು ನಳಿನ್‌ ಕುಮಾರ್‌ ಕಟೀಲ್​ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಕೂಡಲೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲೇಬೇಕು ಅನ್ನೋ ಕೂಗು ಕೇಳಿ ಬಂದಿತ್ತು.

ಇನ್ನು, ಸದ್ಯದಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಅನಿವಾರ್ಯ. ಇದಕ್ಕೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಬಹಳ ಮುಖ್ಯ. ಹೀಗಾಗಿ ಬಿಎಸ್​​ವೈ ಹೆಚ್ಚು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೊಡಗಿಸಿಕೊಳ್ಳಲಿ ಅನ್ನೋ ಉದ್ದೇಶದಿಂದ ಶಾಸಕ ಬಿ.ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.

ಹೌದು, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ನೇಮಿಸಲು ಇದೇ ಕಾರಣ ಎಂದು ತಿಳಿದು ಬಂದಿದೆ.

ಲಿಂಗಾಯತರ ಸೆಳೆಯಲು ಯತ್ನ!

ಬಿ.ಎಸ್​ ಯಡಿಯೂರಪ್ಪ ಅವರನ್ನು ಏಕಾಏಕಿ ಸಿಎಂ ಸ್ಥಾನದಿಂದ ಕೆಳಗಿಳಿಸಲಾಯ್ತು. ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಬಿಜೆಪಿ ತೊರೆದಿದ್ದರು. ಇದರಿಂದ ಬಿಜೆಪಿಯಲ್ಲಿ ಲಿಂಗಾಯತರ ಕಡೆಗಣನೆ ಆಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಆರೋಪವನ್ನು ತಳ್ಳಿ ಹಾಕಲು ಬಿಜೆಪಿ ಮುಂದಾಗಿದೆ. ಹೀಗಾಗಿ ಲಿಂಗಾಯತ ಸಮುದಾಯದ ನಾಯಕ ಬಿವೈ ವಿಜಯೇಂದ್ರಗೆ ಮಣೆ ಹಾಕಿದೆ ಎಂದು ತಿಳಿದು ಬಂದಿದೆ.

ಯಾರು ಈ ವಿಜಯೇಂದ್ರ..?

ವಿಜಯೇಂದ್ರ 2009ರಲ್ಲಿ ಯುವಮೋರ್ಚ ನಾಯಕರಾಗಿದ್ದರು. ಬಳಿಕ 2020ರಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡರು. 2018ರಲ್ಲಿ ಶಿರಾ ಉಪ ಚುನಾವಣೆ ಜವಾಬ್ದಾರಿ ಹೊತ್ತಿದ್ದರು. ಸದ್ಯ ನಳಿನ್ ಕುಮಾರ್ ಕಟೀಲ್​​ಗೆ ಕೊಕ್​ ನೀಡಿ, ಶಾಸಕ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೈಕಮಾಂಡ್​​ ವಿಜಯೇಂದ್ರಗೆ ಮಣೆ ಹಾಕಲು ಕಾರಣವೇನು..? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇಕೆ..?

https://newsfirstlive.com/wp-content/uploads/2023/11/Vijayendra_BSy.jpg

Load More