/newsfirstlive-kannada/media/post_attachments/wp-content/uploads/2024/11/Daali.jpg)
ಕನ್ನಡಿಗರ ಅಚ್ಚು ಮೆಚ್ಚಿನ ನಟ ಡಾಲಿ ಧನಂಜಯ ವಿವಾಹ ಬಂಧಿಯಾಗಲು ರೆಡಿಯಾಗಿದ್ದಾರೆ. ವೈದ್ಯೆ ಧನ್ಯತಾ ಜೊತೆಗೆ ಹಸೆಮಣೆ ಏರುತ್ತಿದ್ದಾರೆ. ಅಂದಹಾಗೆ ಇದೇ ಫೆಬ್ರವರಿಯಲ್ಲಿ ಈ ಜೋಡಿ ಮದುವೆಯಾಗಲು ನಿಶ್ಚಯಿಸಿದ್ದು, ಮೈಸೂರಿನಲ್ಲಿ ವಿವಾಹವಾಗಲಿದ್ದಾರೆ. ಆದರೆ ಧನು ಮತ್ತು ಧನ್ಯತಾ ಮದುವೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಏಕೆ ಗೊತ್ತಾ? ಈ ಸ್ಟೋರಿ ಓದಿ.
ಡಾಲಿ ಮತ್ತು ಧನ್ಯತಾ ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿಯಾಗಿದ್ದು. ಮೈಸೂರಿನಲ್ಲಿ ಓದುತ್ತಿದ್ದಾಗ ಇಬ್ಬರಿಗೆ ಪರಿಚಯವಾಗಿದೆ.
ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳವಾಗಿದೆ. ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಇದೇ ಫೆಬ್ರವರಿ 16ನೇ ತಾರೀಕು ಎಂದರೆ ಭಾನುವಾರ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆಯಾಗಲಿದ್ದಾರೆ.
ಅಂದಹಾಗೆಯೇ ಅದ್ಧೂರಿಯಾಗಿ ನಡೆಯಲಿರುವ ಈ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ನಡೆಯಲಿಕ್ಕಿದೆ. ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.
ಇದನ್ನೂ ಓದಿ: AB ಡಿವಿಲಿಯರ್ಸ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದ ಆರ್ಸಿಬಿ; ಅಸಲಿಗೆ ನಡೆದಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್