2006ರಲ್ಲಿ ಜೆಡಿಎಸ್-ಬಿಜೆಪಿ ಮೊದಲ ಬಾರಿ ಮೈತ್ರಿ ರಾಜಕೀಯ
20:20 ಸರ್ಕಾರ ಪತನವಾಗಿ ಜೆಡಿಎಸ್-ಬಿಜೆಪಿ ಮೈತ್ರಿಯೂ ಕಟ್
ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೂ ಬಿಜೆಪಿ ಬೆಂಬಲ
ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಇಂದಿಗೆ ಹೊಸದಲ್ಲ. ಎರಡೂ ಪಕ್ಷದ ಮೈತ್ರಿಗೆ 17 ವರ್ಷಗಳ ರಾಜಕೀಯ ಇತಿಹಾಸವಿದೆ. 2006ರಲ್ಲಿ ಜೆಡಿಎಸ್-ಬಿಜೆಪಿ ಮೊದಲ ಬಾರಿ ಮೈತ್ರಿ ಮಾಡಿಕೊಂಡು ಹೆಚ್.ಡಿ ಕುಮಾರಸ್ವಾಮಿ ಅವರು 20:20 ಸರ್ಕಾರ ರಚಿಸಿದ್ದರು. 2008ರ ವೇಳೆಗೆ 20:20 ಸರ್ಕಾರ ಪತನವಾಗಿ ಜೆಡಿಎಸ್-ಬಿಜೆಪಿ ಮೈತ್ರಿಯೂ ಕಡಿತವಾಗಿತ್ತು.
ಇದೀಗ ಮತ್ತೆ ಬಿಜೆಪಿ-ಜೆಡಿಎಸ್ ಒಂದಾಗುತ್ತಿದ್ದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ ಈ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆ 4 ಸೀಟ್ ಜೆಡಿಎಸ್‌ಗೆ ಬಿಟ್ಟುಕೊಡುವುದು ಖಚಿತವಾಗಿದೆ. ಶೀಘ್ರದಲ್ಲೇ ನಾನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
JDS ಜೊತೆ ಆದ ಮಾತುಕತೆ ಬಿಚ್ಚಿಟ್ಟ BSY..@BSYBJP @hd_kumaraswamy @H_D_Devegowda
#BSYediyurappa #HDDeveGowda #HDKumaraswamy #Alliances #BJP #JDS #NewsFirstKannada pic.twitter.com/2dUbYAzErO— NewsFirst Kannada (@NewsFirstKan) September 8, 2023
ಬಿಜೆಪಿ-ಜೆಡಿಎಸ್ ಮೈತ್ರಿಯ ಮೈಲಿಗಲ್ಲು ಹೀಗಿದೆ!
2006ರ ಬಳಿಕ 2013ರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಅಘೋಷಿತ ಮೈತ್ರಿ ಮಾಡಿಕೊಳ್ಳಲಾಗಿತ್ತು. ಈ ಮೈತ್ರಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರಲಿಲ್ಲ. ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಬಿಜೆಪಿ ಬೆಂಬಲ ನೀಡಿತ್ತು. ಮಾಜಿ ಡಿಸಿಎಂ ಆರ್.ಅಶೋಕ್ ಅವರು ಅನಿತಾ ಕುಮಾರಸ್ವಾಮಿ ಪರ ಖುದ್ದಾಗಿ ಅಖಾಡಕ್ಕಿಳಿದು ಪ್ರಚಾರ ನಡೆಸಿದ್ದರು. ಇಷ್ಟಾದರೂ 2013 ರಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಗೆಲುವು ದಕ್ಕಲಿಲ್ಲ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಡಿ.ಕೆ.ಸುರೇಶ್ ಗೆಲುವು ಸಾಧಿಸಿದ್ದರು. 2013 ರಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿತ್ತು. ರಾಜ್ಯದಲ್ಲೂ ಸಿದ್ದರಾಮಯ್ಯರ ಸರ್ಕಾರ ಇತ್ತು.
ಮೋದಿ ಅಲೆಯಲ್ಲಿ ಗೆದ್ದಿರುವ ಮಿತ್ರಪಕ್ಷಗಳು
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಲ್ಲೇ ಬಿಜೆಪಿ ಮಿತ್ರಪಕ್ಷಗಳು ಗೆಲುವು ಸಾಧಿಸಿವೆ. 2019ರ ಚುನಾವಣೆ ವೇಳೆ ಉತ್ತರ ಪ್ರದೇಶದಲ್ಲಿ ಅಪ್ನಾದಳ ಸ್ಪರ್ಧಿಸಿದ್ದ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಬಿಹಾರದಲ್ಲಿ ಜೆಡಿಯು, ಲೋಕಜನಶಕ್ತಿ ಪಕ್ಷಕ್ಕೂ ಭರ್ಜರಿ ಗೆಲುವು ಸಿಕ್ಕಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಪಕ್ಷ 23 ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ 18 ಕ್ಷೇತ್ರದಲ್ಲಿ ಗೆದ್ದಿದೆ. ಈಗ ಕರ್ನಾಟಕದಲ್ಲಿ 3ನೇ ಬಾರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ.
ಇದನ್ನೂ ಓದಿ: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಮುಂದಾಗಿದ್ದೇಕೆ? ಚುನಾವಣೆಯಲ್ಲಿ ಯಾರಿಗೆ ಲಾಭ? ಯಾರಿಗೆ ನಷ್ಟ?
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಆದ್ರೆ, ಮೈತ್ರಿಯಿಂದ ಕಾಂಗ್ರೆಸ್ ಮತ ಜೆಡಿಎಸ್‌ಗೆ ಜೆಡಿಎಸ್ ಮತ ಕಾಂಗ್ರೆಸ್‌ಗೆ ವರ್ಗಾವಣೆಯಾಗಿರಲಿಲ್ಲ. ಇದೀಗ ಜೆಡಿಎಸ್-ಬಿಜೆಪಿ ನಡುವೆ 2024ರ ಚುನಾವಣೆಗೆ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಯಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಕುತೂಹಲ ಸಹಜವಾಗಿಯೇ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳಿಗೂ ಲಾಭವಾಗುತ್ತಾ, ನಷ್ಟವಾಗುತ್ತಾ ಅನ್ನೋ ಬಗ್ಗೆ ಮಹತ್ವದ ಚರ್ಚೆಯಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ