/newsfirstlive-kannada/media/post_attachments/wp-content/uploads/2025/04/SALT_RCB.jpg)
ದೆಹಲಿಯ ಜೇಟ್ಲಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡವು ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಎದುರಿಸಿತು. 6 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದ ಆರ್ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್ ವಿಭಾಗದ ದೈತ್ಯ ಶಕ್ತಿ, ಫಿಲ್ ಸಾಲ್ಟ್ ಆಡದಿರೋದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಸಾಲ್ಟ್ಗೆ ಏನಾಗಿದೆ..?
ಟಾಸ್ ಬಳಿಕ ಕ್ಯಾಪ್ಟನ್ ಪಾಟೀದರ್ ನೀಡಿರುವ ಮಾಹಿತಿ ಪ್ರಕಾರ, ಸಾಲ್ಟ್ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ನಿನ್ನೆಯ ಪ್ಲೇಯಿಂಗ್-11ನಿಂದ ಕೊಕ್ ನೀಡಲಾಗಿದೆ. ಬದಲಾಗಿದೆ ಜಕೋಬ್ ಬೇಥೆಲ್ ಅವರಿಗೆ ಸ್ಥಾನ ನೀಡಲಾಗಿತ್ತು.
ಆರ್ಸಿಬಿಯ ಮುಂದಿನ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಅಷ್ಟರೊಳಗೆ ಸಾಲ್ಟ್ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿ ಆರ್ಸಿಬಿ ಮ್ಯಾನೇಜ್ಮೆಂಟ್ ಇದೆ. ವಿಶ್ರಾಂತಿಯಲ್ಲಿರುವ ಸಾಲ್ಟ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಶುಭ ಹಾರೈಸುತ್ತಿದ್ದಾರೆ.
ಇದನ್ನೂ ಓದಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳಿಗೆ ಮೂರು ಗುಡ್ನ್ಯೂಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ