/newsfirstlive-kannada/media/post_attachments/wp-content/uploads/2023/10/Yashaswi-Jaiswal-1.jpg)
ಇತ್ತೀಚೆಗೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡ ವಿರುದ್ಧ 4 ವಿಕೆಟ್ಗಳಿಂದ ಗೆದ್ದು ಬೀಗಿದೆ. ಇಂದು ನಡೆಯುತ್ತಿರೋ ಮಹತ್ವದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ ಮುಖಾಮುಖಿ ಆಗಿವೆ. ಹೇಗಾದ್ರೂ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ಭಾರತ ತಂಡ ಎದುರು ನೋಡುತ್ತಿದೆ.
ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಅವಕಾಶ ಸಿಕ್ಕಿದೆ. ಇದು ಭಾರತದ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿ ಆಗಿದ್ದು, ಕೊಹ್ಲಿ ಬ್ಯಾಟಿಂಗ್ ಕಣ್ತುಂಬಿಸಿಕೊಳ್ಳಲು ಕಾಯುತ್ತಿದ್ದಾರೆ.
ಯುವ ಬ್ಯಾಟರ್ಗೆ ಗೇಟ್ಪಾಸ್
ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ. ಹೀಗಾಗಿ ಮೊದಲನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ಗೆ ಗೇಟ್ಪಾಸ್ ನೀಡಲಾಗಿದೆ. ಇದಕ್ಕೆ ಕಾರಣ ಮೊದಲ ಪಂದ್ಯದಲ್ಲಿ ಜೈಸ್ವಾಲ್ ಗಮನಾರ್ಹ ಪ್ರದರ್ಶನ ನೀಡಲಿಲ್ಲ ಎಂಬುದು.
ಕೊಹ್ಲಿ ಕಮ್ಬ್ಯಾಕ್ ಮಾಡಲೇಬೇಕು
ಕೊಹ್ಲಿ ಸಂಪೂರ್ಣ ಫಿಟ್ ಆಗಿದ್ದು, 2ನೇ ಏಕದಿನ ಪಂದ್ಯಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುತ್ತಿದ್ದು, ಕೊಹ್ಲಿ 2ನೇ ಏಕದಿನ ಪಂದ್ಯ ಆಡಲೇಬೇಕಿತ್ತು. ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿರೋ ಇವರು ಉಳಿದ ಎರಡು ಪಂದ್ಯಗಳಲ್ಲಿ ಲಯಕ್ಕೆ ಮರಳಬೇಕಿದೆ.
ನಾಗ್ಪುರ ಏಕದಿನ ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ಕೊಹ್ಲಿ ಮೊಣಕಾಲಿಗೆ ಇಂಜುರಿ ಆಗಿತ್ತು. ಹಾಗಾಗಿ ಇವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಬಗ್ಗೆ ಖುದ್ದು ಕ್ಯಾಪ್ಟನ್ ರೋಹಿತ್ ಶರ್ಮಾ ಮಾಹಿತಿ ನೀಡಿದ್ದರು.
ಇದನ್ನೂ ಓದಿ:ಇಂಗ್ಲೆಂಡ್ ತಂಡದಿಂದ ಭರ್ಜರಿ ಬ್ಯಾಟಿಂಗ್; ಟೀಮ್ ಇಂಡಿಯಾಗೆ ಬಿಗ್ ಟಾರ್ಗೆಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ