ದುರ್ಬಲಗೊಂಡಿದ್ದ ಮುಂಗಾರು ಚುರುಕಾಗುವ ಸಾಧ್ಯತೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆ ಬರಲಿದೆ
ಕರಾವಳಿ ಭಾಗದಲ್ಲಿ ಗಾಳಿಯ ವೇಗ ಇನ್ನೂ ಹೆಚ್ಚುವಾಗುವ ಸಾಧ್ಯತೆ
ಕೆಲವು ದಿನಗಳಿಂದ ಮಳೆ ಬರುವುದೇ ಅಪರೂಪವಾಗಿತ್ತು. ಆದರೆ ಇಂದಿನಿಂದ ದುರ್ಬಲಗೊಂಡಿದ್ದ ಮುಂಗಾರು ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸಿಲಿಕಾನ್ ಸಿಟಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಇಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ಇಂದಿನಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಬರಲಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಮೀನುಗಾರರೇ ಎಚ್ಚರ
ಮಾನ್ಸೂನ್ ತೀವ್ರವಾದಲ್ಲಿ ಗಾಳಿಯ ವೇಗ ಇನ್ನೂ ಹೆಚ್ಚುವಾಗುವ ಸಾಧ್ಯತೆ ಇದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರ ಇಳಿಯದಂತೆ ಸೂಚನೆ ಹೊರಡಿಸಲಾಗಿದೆ. ಇದರ ಜೊತೆಗೆ ಸ್ಥಳೀಯರು, ಪ್ರವಾಸಿಗರಿಗೂ ಕೂಡ ಸಮುದ್ರದ ತೀರದಲ್ಲಿ ಓಡಾಡುವುದು, ಆಟವಾಡುವುದನ್ನು ನಿರ್ಭಂದಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ