newsfirstkannada.com

ಗಂಡ ಮತ್ತು ಆತನ ಗರ್ಲ್​​ಫ್ರೆಂಡ್ ವಿರುದ್ಧ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

Share :

04-07-2023

    ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

    ಪತಿಯ ಕಂಪನಿಯಲ್ಲೇ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಗೃಹಿಣಿ

    ಮಗಳ ವಾಟ್ಸ್​ಆ್ಯಪ್​ ಸ್ಟೇಟಸ್ ನಲ್ಲಿ ಡೆತ್ ನೋಟ್ ಹಾಕಿ ಆತ್ಮಹತ್ಯೆ

ಬೆಂಗಳೂರು: ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಹೆಗ್ಗನಹಳ್ಳಿ‌ಯಲ್ಲಿ ನಡೆದಿದೆ. ಪವಿತ್ರ ಎಂಬಾಕೆ ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಕೌಟುಂಬಿಕ ಕಲಹ ಹಿನ್ನಲೆ ಪವಿತ್ರ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಪತಿ ಹಾಗೂ ಆತನ ಗರ್ಲ್’ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜುಲೈ 02 ರ ಬೆಳಗಿನ ಜಾವ ನಡೆಸಿರೋ ಘಟನೆ ಇದಾಗಿದ್ದು, ಪವಿತ್ರ ಡೆತ್ ನೋಟ್ ಬರೆದಿಟ್ಟು ವಾಟ್ಸ್​ಆ್ಯಪ್​ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾರೆ.

2ನೇ ಮದುವೆಯಾಗಿದ್ದ ಪವಿತ್ರ

ಪವಿತ್ರ ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡರನ್ನ ಪವಿತ್ರ ಎರಡನೇ ಮದುವೆಯಾಗಿದ್ದಳು. ಚೇತನ್ ಸುಮುಖ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕನಾಗಿದ್ದು, ಮೃತ ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಾ ಇದ್ದರು.

ಪತಿ-ಪತ್ನಿ ಮಧ್ಯೆ ಜಗಳ

ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ತನ್ನ ತಾಯಿ ಪದ್ಮಮ್ಮ ಬಳಿ ಪವಿತ್ರ ತಿಳಿಸಿದ್ದಳು. ಕಡೆಗೆ ಮನನೊಂದು ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ಡೆತ್ ನೋಟ್ ಹಾಕಿ ನೇಣಿಗೆ ಶರಣಾಗಿದ್ದಾರೆ.

ಡೆತ್ ನೋಟ್ ಬರೆದು ಸುಸೈಡ್​

ಪವಿತ್ರ ಮಗಳ ವಾಟ್ಸ್​ಆ್ಯಪ್​ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಮೃತಳ ತಾಯಿ ಪದ್ಮಮ್ಮರ ದೂರಿನನ್ವಯ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ದೂರು ದಾಖಲಾಗಿದ್ದು, ಪೊಲೀಸರು ಡೆತ್ ನೋಟ್ ಹಾಗೂ ಮೃತಳ ಎರಡು ಪೋನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗಂಡ ಮತ್ತು ಆತನ ಗರ್ಲ್​​ಫ್ರೆಂಡ್ ವಿರುದ್ಧ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

https://newsfirstlive.com/wp-content/uploads/2023/07/Pavitra-Gowda.jpg

Load More