/newsfirstlive-kannada/media/post_attachments/wp-content/uploads/2023/07/hasana.jpg)
ಹಾಸನ: ಪತ್ನಿಯ ಶೀಲ ಶಂಕಿಸಿ ಪತಿ ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಂಬಿಕಾ (28) ಕೊಲೆಯಾದ ಮೃತ ದುರ್ದೈವಿ. ಪತಿ ಚಂದ್ರಮೌಳಿ ಕೊಲೆ ಮಾಡಿದ ಆರೋಪಿ.
ಪತಿ ಚಂದ್ರಮೌಳಿಯು ಕೆಲಸಕ್ಕೆ ಹೋಗಿದ್ದ ಪತ್ನಿಯನ್ನು ಫೋನ್ ಮಾಡಿ ಕರೆಸಿಕೊಂಡಿದ್ದ. ಬಳಿಕ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಮೃತ ಅಂಬಿಕಾ ಆಲಗೌಡನಹಳ್ಳಿ ಗ್ರಾಮದ ನಿವಾಸಿ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ