ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

author-image
Veena Gangani
Updated On
ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ
Advertisment
  • ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ
  • ಕಾಫಿ ತೋಟದ ಕೆಲಸಕ್ಕೆಂದು ಹೋಗಿದ್ದಾಗ ನಡೆದ ಘಟನೆ
  • ಆಲ್ದೂರು ವಲಯದಲ್ಲಿ ಬೀಡು ಬಿಟ್ಟಿರೋ 7 ಕಾಡಾನೆಗಳು

ಚಿಕ್ಕಮಗಳೂರು: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿರೋ ದಾರುಣ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ. ವೀಣಾ (45) ಮೃತ ಮಹಿಳೆ.

publive-image

ವೀಣಾ ಎಂಬುವವರು ಕಾಫಿ ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿವೆ. ಕಾಡಾನೆ ದಾಳಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇದು ಎರಡನೇ ಬಲಿಯಾಗಿದೆ.

publive-image

ಕೂಡಲೇ ಕಾಡಾನೆಯನ್ನು ಓಡಿಸುವಂತೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲೇ ಸುತ್ತಮುತ್ತಲಿನ ತೋಟದಲ್ಲಿ ಇರುವ ಕಾಡಾನೆಗಳು ಇವೆ. 7 ಕಾಡಾನೆಗಳ ಹಿಂಡು ಆಲ್ದೂರು ವಲಯದ ಅರಣ್ಯದಲ್ಲಿ ಬೀಡು ಬಿಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment