newsfirstkannada.com

ಮೋದಿ ಆಗಮನಕ್ಕೂ ಮುನ್ನವೇ ಮೈಸೂರಲ್ಲಿ ಮಹತ್ವದ ಬೆಳವಣಿಗೆ; ಕೈ ಕೊಡ್ತಾರಾ ಶ್ರೀನಿವಾಸ ಪ್ರಸಾದ್?

Share :

Published April 14, 2024 at 3:23pm

    ಮೈಸೂರಲ್ಲಿ ಮೋದಿ ಸಮಾವೇಶ ಯಶಸ್ವಿಗೊಳಿಸಲು ಭಾರೀ ಕಸರತ್ತು

    ಮನೆಗೆ ತೆರಳಿ ಬಿಜೆಪಿ ಸಮಾವೇಶಕ್ಕೆ ಬಿ.ಎಸ್.ಯಡಿಯೂರಪ್ಪ ಆಹ್ವಾನ

    ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಜೆಡಿಎಸ್‌ ಪಕ್ಷದ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಸಮಾವೇಶ ಮಹತ್ವ ಪಡೆದುಕೊಂಡಿದೆ.

ಪ್ರಧಾನಿ ಮೋದಿ ಆಗಮನಕ್ಕೂ ಮುನ್ನವೇ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಬಿಜೆಪಿ ನಾಯಕರು ಸಮಾವೇಶ ಯಶಸ್ವಿಗೊಳಿಸಲು ಭಾರೀ ಕಸರತ್ತು ಮಾಡುತ್ತಿದ್ದಾರೆ. ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ ಮನವೊಲಿಸಿ ಮೋದಿ ಸಮಾವೇಶಕ್ಕೆ ಕರೆತರಲು ಸಾಕಷ್ಟು ಶ್ರಮವಹಿಸಿದ್ದಾರೆ.

ನಿನ್ನೆಯಷ್ಟೇ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದರು. ಇದಾದ ಬಳಿಕ ಶ್ರೀನಿವಾಸ ಪ್ರಸಾದ್ ಅವರ ಮನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಬಿಜೆಪಿ ಸಮಾವೇಶಕ್ಕೆ ಶ್ರೀನಿವಾಸ ಪ್ರಸಾದ್ ಅವರನ್ನು ಬಿ.ಎಸ್.ಯಡಿಯೂರಪ್ಪ ಆಹ್ವಾನಿಸಿ ಬಂದಿದ್ದಾರೆ.

ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ನಾನು ಬಂದು ಮಾತನಾಡಿದ್ದೇನೆ. ಕಾರ್ಯಕ್ರಮಕ್ಕೆ ಬರಲು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮಾತಿಗೆ ಗೌರವ ಕಟ್ಟಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ಮೋದಿ ಸಮಾವೇಶಕ್ಕೆ ಶ್ರೀನಿವಾಸ ಪ್ರಸಾದ್‌ ಬರ್ತಾರೆ ಅಂದ್ರು. ಯಡಿಯೂರಪ್ಪ ಮನೆಯಿಂದ ಹೊರಗೆ ಹೋಗುತ್ತಿದ್ದಂತೆಯೇ ಶ್ರೀನಿವಾಸ ಪ್ರಸಾದ್ ಅವರು ಉಲ್ಟಾ ಹೊಡೆದಿದ್ದಾರೆ. ಮನೆ ಬಾಗಿಲಿಗೆ ಬಂದವರಿಗೆ ಅಗೌರವ ತೋರಲು ಆಗಲ್ಲ. ಪ್ರಧಾನಿ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಹೋಗೋದು ಬಿಡೋದು ನನ್ನ ತೀರ್ಮಾನ ಎಂದು ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

ಇದನ್ನೂ ಓದಿ: ಉಚಿತ, ಉಚಿತ, ಉಚಿತ..! ಮೋದಿ ಪ್ರಣಾಳಿಕೆಯಲ್ಲಿ ಏನೆಲ್ಲ ಉಚಿತ ಘೋಷಣೆ..?

ವಿ.ಶ್ರೀನಿವಾಸ ಪ್ರಸಾದ್ ಅವರು ಹಿರಿಯ ಅನುಭವಿ ರಾಜಕಾರಣಿಯಾಗಿದ್ದಾರೆ. ಈ ಬಾರಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರೂ ಇವರ ಪ್ರಭಾವ ಈ ಭಾಗದಲ್ಲಿ ಬಹಳಷ್ಟಿದೆ. ಹೀಗಿರುವಾಗ ಶ್ರೀನಿವಾಸ ಪ್ರಸಾದ್ ಅವರನ್ನ ಸೆಳೆಯಲು ಕಾಂಗ್ರೆಸ್, ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಶ್ರೀನಿವಾಸ ಪ್ರಸಾದ್ ಬೆಂಬಲಿಗರು, ಕುಟುಂಬ ಸದಸ್ಯರು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಹೀಗಿರುವಾಗ ವಿ. ಶ್ರೀನಿವಾಸ ಪ್ರಸಾದ್ ಅವರು ಮೋದಿ ಸಮಾವೇಶಕ್ಕೆ ಹಾಜರಾಗುತ್ತಾರಾ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೋದಿ ಆಗಮನಕ್ಕೂ ಮುನ್ನವೇ ಮೈಸೂರಲ್ಲಿ ಮಹತ್ವದ ಬೆಳವಣಿಗೆ; ಕೈ ಕೊಡ್ತಾರಾ ಶ್ರೀನಿವಾಸ ಪ್ರಸಾದ್?

https://newsfirstlive.com/wp-content/uploads/2024/04/pm-modi5.jpg

Load More