Advertisment

ಬಿಜೆಪಿಗೆ ಬಿಗ್​ ಶಾಕ್.. ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಯುತ್ತಾರಾ ಡಾ.ಕೆ ಸುಧಾಕರ್? ಕ್ಷೇತ್ರ ಯಾವುದು?

author-image
admin
Updated On
ಬಿಜೆಪಿಗೆ ಬಿಗ್​ ಶಾಕ್.. ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಯುತ್ತಾರಾ ಡಾ.ಕೆ ಸುಧಾಕರ್? ಕ್ಷೇತ್ರ ಯಾವುದು?
Advertisment
  • ಬಿಜೆಪಿ ಹೈಕಮಾಂಡ್ ನಾಯಕರ ಬಳಿ ಚಿಕ್ಕಬಳ್ಳಾಪುರ ಟಿಕೆಟ್‌ಗೆ ಬೇಡಿಕೆ
  • ಶಾಸಕ S.R ವಿಶ್ವನಾಥ್ ಪುತ್ರ ಅಲೋಕ್ ಅವರಿಗೆ ಬಿಜೆಪಿ ಟಿಕೆಟ್ ಸಾಧ್ಯತೆ
  • ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಜೊತೆ ಡಾ.ಕೆ ಸುಧಾಕರ್ ರಹಸ್ಯ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆಗೂ ಮುನ್ನವೇ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಕಾಂಗ್ರೆಸ್ ನಾಯಕರನ್ನು ಸಂಪರ್ಕ ಮಾಡಿದ್ದಾರೆ. ಉನ್ನತ ಮೂಲಗಳಿಂದಲೇ ನ್ಯೂಸ್‌ಫಸ್ಟ್‌‌ಗೆ ಈ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

Advertisment

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಡಾ.ಕೆ ಸುಧಾಕರ್ ಅವರು 2019ರಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದರು. ಉಪಚುನಾವಣೆಯಲ್ಲಿ ಗೆದ್ದ ಬಳಿಕ ಆರೋಗ್ಯ ಸಚಿವರು ಆಗಿದ್ದರು. ಇದೀಗ ಡಾ.ಕೆ.ಸುಧಾಕರ್ ಅವರು ಬಿಜೆಪಿಗೆ ಬಿಗ್‌ ಶಾಕ್ ಕೊಟ್ಟು ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಯುತ್ತಾರೆ ಅನ್ನೋ ಚರ್ಚೆ ನಡೀತಿದೆ.

ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಲೋಕಸಭಾ ಚುನಾವಣಾ ಕಣಕ್ಕೆ ಇಳಿಯಲು ರೆಡಿಯಾಗಿದ್ದರು. ಬಿಜೆಪಿ ಹೈಕಮಾಂಡ್ ನಾಯಕರ ಬಳಿ ಚಿಕ್ಕಬಳ್ಳಾಪುರ & ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ಗೆ ಬೇಡಿಕೆಯಿಟ್ಟಿದ್ದರು. ಆದರೆ ಸುಧಾಕರ್ ಜೊತೆಗೆ ಚಿಕ್ಕಬಳ್ಳಾಪುರ ಟಿಕೆಟ್‌ಗಾಗಿ ಬಿಜೆಪಿ ನಾಯಕ​ S.R ವಿಶ್ವನಾಥ್ ಪಟ್ಟು ಹಿಡಿದಿದ್ದಾರೆ. ಶಾಸಕ S.R ವಿಶ್ವನಾಥ್ ಪುತ್ರ ಅಲೋಕ್​ ಅವರಿಗೆ ಚಿಕ್ಕಬಳ್ಳಾಪುರ ಬಿಜೆಪಿ ಟಿಕೆಟ್​ ಬಹುತೇಕ ಫಿಕ್ಸ್​ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಆಗ್ತಾರಾ ಒಡೆಯರ್..? ಕುತೂಹಲ ಮೂಡಿಸಿದ ಯದುವೀರ್ ಶಾರದಾಂಬೆ ದರ್ಶನ

Advertisment

ವಿಶ್ವನಾಥ್ ಪುತ್ರ ಅಲೋಕ್​ಗೆ ಚಿಕ್ಕಬಳ್ಳಾಪುರ ಟಿಕೆಟ್‌ ನೀಡಿದ್ರೆ ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೊಡಿ ಎಂದು ಸುಧಾಕರ್ ಮನವಿ ಮಾಡಿದ್ದರು. ಆದ್ರೀಗ ಹಾಲಿ ಸಂಸದ ಡಿ.ವಿ ಸದಾನಂದಗೌಡ ಅವರು ಸೇರಿ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಹಲವು ನಾಯಕರ ಕಣ್ಣಿಟ್ಟಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಡಾ.ಕೆ ಸುಧಾಕರ್ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ರೆ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಲು ಸುಧಾಕರ್ ಸಜ್ಜಾಗಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆದರೆ ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸುಧಾಕರ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಕುರಿತು ನ್ಯೂಸ್‌ಫಸ್ಟ್‌‌ಗೆ ಬಿಜೆಪಿ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment