newsfirstkannada.com

Breaking News: ಲೋಕಸಭೆ ಚುನಾವಣೆ ಒಳಗಾಗಿಯೇ ದೇಶದಲ್ಲಿ CAA ಜಾರಿ -ಅಮಿತ್ ಶಾ ಘೋಷಣೆ

Share :

Published February 10, 2024 at 2:24pm

    ಅಮಿತ್ ಶಾ ಅವರಿಂದ ಮತ್ತೊಮ್ಮೆ ಪೌರತ್ವ ಜಾರಿ ಬಗ್ಗೆ ಭರವಸೆ

    ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಜಾರಿಗೆ ತರ್ತೀವಿ-ಅಮಿತ್ ಶಾ

    400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ ಎಂದ ಕೇಂದ್ರ ಸಚಿವ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 370 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಎನ್​ಡಿಎ ಒಕ್ಕೂಟವು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚನೆ ಮಾಡುವ ಬಗ್ಗೆ ವಿಶ್ವಾಸ ಇದೆ ಎಂದಿರುವ ಅಮಿತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಅನ್ನೋದ್ರ ಬಗ್ಗೆ ಯಾವುದೇ ಸಸ್ಪೆನ್ಸ್ ಆಗಿ ಉಳಿದಿಲ್ಲ. ಕಾಂಗ್ರೆಸ್​ಗೆ ಕೂಡ ಅದು ಅರ್ಥ ಆಗಿದೆ. ಲೋಕಸಭೆ ಚುನಾವಣೆ ಒಳಗಾಗಿಯೇ ನಾವು ದೇಶದಾದ್ಯಂತ ಸಿಎಎ (Citizenship Amendment) Act, 2019 ಜಾರಿಗೆ ತರುತ್ತೇವೆ. 2019ರಲ್ಲಿ ಸಿಎಎ (ತಿದ್ದುಪಡಿ) ಮಸೂದೆ ಅಂಗೀಕಾರಗೊಂಡಿದೆ. ಕೊಟ್ಟ ಮಾತಿನಂತೆ ಲೋಕಸಭೆ ಚುನಾವಣೆ ಒಳಗಾಗಿ ಜಾರಿಗೆ ತರುತ್ತೇವೆ.

ಸಿಎಎ ವಿಚಾರದಲ್ಲಿ ನಮ್ಮ ಮುಸ್ಲಿಂ ಸಹೋದರರನ್ನು ಮಿಸ್ ಲೀಡ್ ಮಾಡಲಾಗುತ್ತಿದೆ. ಇದು ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ಕಿತ್ತುಕೊಳ್ಳುವುದಕ್ಕಾಗಿ ನಾವು ಜಾರಿಗೆ ತರುತ್ತಿಲ್ಲ. ಇದರ ಉದ್ದೇಶ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತದಲ್ಲಿ ಆಶ್ರಯ ಪಡೆದುಕೊಂಡವರಿಗೆ ನೀಡುತ್ತಿರುವ ಪೌರತ್ವ ಅಷ್ಟೇ. ಇದರಲ್ಲಿ ದೇಶದಲ್ಲಿರುವ ನಾಗರಿಕರ ಪೌರತ್ವವನ್ನು ಕಿತ್ತುಕೊಳ್ಳುತ್ತಿಲ್ಲ ಎಂದು ಭರವಸೆ ನೀಡಿದ್ದಾರೆ.

ಏನಿದು ಪೌರತ್ವ ಕಾಯ್ದೆ..?

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಪೌರತ್ವ (ತಿದ್ದುಪಡಿ) ಕಾಯ್ದೆ (Citizenship Act, 2019) ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪೌರತ್ವ ತಿದ್ದುಪಡಿ ಮಸೂದೆಯನ್ನು 2019ರಲ್ಲಿ ಸಂಸತ್ ಅಂಗೀಕರಿಸಿದೆ. ಈ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಇಲ್ಲಿನ ಪೌರತ್ವ ನೀಡುವುದನ್ನು ಪ್ರತಿಪಾದಿಸುತ್ತದೆ. ಮುಸ್ಲಿಮರನ್ನು ಈ ಕಾಯ್ದೆಯಿಂದ ದೂರ ಇಡಲಾಗಿದೆ. 2014 ಡಿಸೆಂಬರ್ 31ರ ಮೊದಲು ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡಲು ಅವಕಾಶ ಮಾಡಿಕೊಡುತ್ತದೆ.

ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರ ಆಗುತ್ತಿದ್ದಂತೆಯೇ ದೇಶದಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿವೆ. ಇದೇ ಕಾರಣಕ್ಕೆ ಕಾನೂನಿನ ಅಧಿನಿಯಮವನ್ನು ಇಲ್ಲಿಯವರೆಗೆ ತಿಳಿಸಿಲ್ಲ. ನಿಯಮ ಜಾರಿಗೊಳಿಸುವ ವಿಚಾರದಲ್ಲಿ ಭಾರತ ಸರ್ಕಾರ ಪದೇ ಪದೆ ಮುಂದೂಡಿಕೆ ಮಾಡುತ್ತಿದೆ. ಇದೀಗ ಕೇಂದ್ರ ಸರ್ಕಾರ ಅದಕ್ಕೆ ಅಂತಿಮ ಟಚ್ ನೀಡಲು ನಿರ್ಧರಿಸಿದ್ದು, ಆನ್​ಲೈನ್ ಪೋರ್ಟಲ್ ಕೂಡ ತಯಾರಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಭಾರತ ಪೌರತ್ವ ಪಡೆದುಕೊಳ್ಳೋದು ಸಂಪೂರ್ಣ ಆನ್​ಲೈನ್ ಪ್ರಕ್ರಿಯೆ ಆಗಿರಲಿದ್ದು, ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಲೋಕಸಭೆ ಚುನಾವಣೆ ಒಳಗಾಗಿಯೇ ದೇಶದಲ್ಲಿ CAA ಜಾರಿ -ಅಮಿತ್ ಶಾ ಘೋಷಣೆ

https://newsfirstlive.com/wp-content/uploads/2024/02/AMIT-SHAH-3.jpg

Load More