newsfirstkannada.com

BREAKING: ಶಿವಮೊಗ್ಗ ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ?

Share :

Published April 2, 2024 at 12:27pm

    ಶಿವಮೊಗ್ಗದ ಬಂಡಾಯಕ್ಕೆ ಚುನಾವಣಾ ಚಾಣಕ್ಯ ಅಮಿತ್ ಶಾ ಎಂಟ್ರಿ!

    ಮಗನಿಗೆ ಟಿಕೆಟ್ ಸಿಗಲಿಲ್ಲ ಎಂದು ಕೋಪಗೊಂಡಿದ್ದ ಈಶ್ವರಪ್ಪಗೆ ಭರವಸೆ

    ತುರ್ತು ಸುದ್ದಿಗೋಷ್ಟಿ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಲಿರುವ ಈಶ್ವರಪ್ಪ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ಅಖಾಡದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡಕ್ಕೆ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರೇ ಎಂಟ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಎಸ್ ಈಶ್ವರಪ್ಪ ಇವತ್ತು ತುರ್ತು ಸುದ್ದಿಗೋಷ್ಟಿ ಕರೆದು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರದ ಬಗ್ಗೆ ನಾಯಕರ ಜೊತೆ ಚರ್ಚೆ ನಡೆಸುತ್ತಿರುವ ಅಮಿತ್ ಶಾ ಅವರು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಎಲೆಕ್ಷನ್‌ ಹೊಸ್ತಿಲಲ್ಲೇ ಎಡವಿದ್ರಾ ಕೆ.ಎಸ್​ ಈಶ್ವರಪ್ಪ? ಶಿವಮೊಗ್ಗದ ಬಂಡಾಯಕ್ಕೆ ಹೊಸ ಟ್ವಿಸ್ಟ್; ಏನದು?

ಕೆ.ಎಸ್ ಈಶ್ವರಪ್ಪಗೆ ಕರೆ ಮಾಡಿ 10 ನಿಮಿಷಗಳ ಕಾಲ ಮಾತನ್ನಾಡಿದ ಅಮಿತ್ ಶಾ ಅವರು ಕೆಲವು ಭರವಸೆಗಳನ್ನು ನೀಡಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ತನ್ನ ಮಗನಿಗೆ ಟಿಕೆಟ್ ಸಿಗಲಿಲ್ಲ ಎಂದು ಕೋಪಗೊಂಡಿದ್ದ ಈಶ್ವರಪ್ಪನವರು ಅಮಿತ್ ಶಾ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ದೂರವಾಣಿಯಲ್ಲಿ ಅಮಿತ್ ಶಾ ಕೊಟ್ಟಿರುವ ಭರವಸೆಯನ್ನು ಈಶ್ವರಪ್ಪ ಒಪ್ಪಿಕೊಂಡಿದ್ದು, ಯಡಿಯೂರಪ್ಪ ಪುತ್ರನ ವಿರುದ್ಧ ಚುನಾವಣಾ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಅಮಿತ್ ಶಾ ದೂರವಾಣಿ ಕರೆ ಮಾಡಿದ ಬಳಿಕ ಕೆ.ಎಸ್‌ ಈಶ್ವರಪ್ಪನವರು ತಮ್ಮ ನಿರ್ಧಾರ ಬದಲಾಯಿಸುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅನ್ನೋದು ಈಗಾಗಲೇ ಪ್ರಕಟವಾಗಿದೆ. ಈ ಮಧ್ಯೆ ಬಂಡಾಯದ ಬಾವುಟ ಹಾರಿಸಿದ್ದ ಕೆ.ಎಸ್‌ ಈಶ್ವರಪ್ಪನವರ ಮುಂದಿನ ನಿರ್ಧಾರ ಬಿಜೆಪಿ ಪಕ್ಷದಲ್ಲಿ ಕುತೂಹಲ ಕೆರಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಶಿವಮೊಗ್ಗ ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ?

https://newsfirstlive.com/wp-content/uploads/2024/02/KS_ESHWARAPPA-1.jpg

Load More