newsfirstkannada.com

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಸಚಿವ ಸತೀಶ್ ಜಾರಕಿಹೊಳಿ?

Share :

31-07-2023

  ಇತ್ತೀಚೆಗೆ ದೆಹಲಿಗೆ ಭೇಟಿ ಕೊಟ್ಟಿದ್ದ ಸತೀಶ್ ಜಾರಕಿಹೊಳಿ ನಿರ್ಧಾರ

  ಕಾಂಗ್ರೆಸ್ ಹೈಕಮಾಂಡ್‌ಗೆ ಸತೀಶ್ ಜಾರಕಿಹೊಳಿ ಹೇಳಿರೋದೇನು?

  ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಲೋಕೋಪಯೋಗಿ ಸಚಿವರು

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶೀಘ್ರವೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನವನ್ನು ತ್ಯಜಿಸುವ ಸಾಧ್ಯತೆ ಇದೆ. ಇತ್ತೀಚೆಗೆ ದೆಹಲಿಗೆ ಭೇಟಿ ಕೊಟ್ಟಿದ್ದ ಸತೀಶ್ ಜಾರಕಿಹೊಳಿ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಬಗ್ಗೆ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಲೋಕೋಪಯೋಗಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಈ ಹಿನ್ನೆಲೆ ಪಕ್ಷ ಸಂಘಟನೆಯ ಕೆಲಸ ಕಷ್ಟ ಸಾಧ್ಯವಾಗಿದೆ. ಹೀಗಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

2024ರ ಲೋಕಸಭಾ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2ರಂದು ರಾಜ್ಯ ನಾಯಕರ ಮಹತ್ವದ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಈ ಸಭೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ 37 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಪಕ್ಷ ಸಂಘಟನೆಯ ಕುರಿತಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: VIDEO: ‘ಕೇಂದ್ರ ಸರ್ಕಾರ ಹ್ಯಾಕ್ ಮಾಡಿರೋದ್ರಿಂದಲೇ ಸರ್ವರ್ ಡೌನ್’- ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಇನ್ನು, ಎರಡು ತಿಂಗಳಲ್ಲಿ ಸಚಿವರ ರಿಪೋರ್ಟ್ ಕೊಡೋದಕ್ಕೆ ಆಗೋದಿಲ್ಲ. ಸಚಿವರಿಗೆ ಕನಿಷ್ಟ ಆರು ತಿಂಗಳಾದರೂ ಬೇಕು. ನಾವೀಗ ಮಂತ್ರಿಗಳಾಗಿದ್ದೇವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಲ್ಲಿ ಬೇರೆಯವರು ಬೇಕು. ನಾವು ಸಚಿವರಾಗಿರುವ ಕಾರಣ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿಲ್ಲ. ಕೆಪಿಸಿಸಿ ಕಚೇರಿಯಲ್ಲಿ ಹೋಗಿ ನಾವು ಕೂರಲು ಆಗೋದಿಲ್ಲ. ಅದಕ್ಕೆ ಬದಲಾವಣೆ ಅನಿವಾರ್ಯ. ಬೇರೆಯವರಿಗೆ ಕಾರ್ಯಾಧ್ಯಕ್ಷ ಸ್ಥಾನ ಕೊಡುವಂತೆ ಕೇಳಿದ್ದೇನೆ. ಹೈಕಮಾಂಡ್ ನಾಯಕರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೆಹಲಿ ಸಭೆಯಲ್ಲಿ ಪಕ್ಷ ಸಂಘಟನೆ, ಹೊಸ ಟೀಂ ಬಗ್ಗೆ ಚರ್ಚೆಯಾಗಲಿದೆ ಎಂದು ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಸಚಿವ ಸತೀಶ್ ಜಾರಕಿಹೊಳಿ?

https://newsfirstlive.com/wp-content/uploads/2023/06/SATISH_JARAKIHOLI.jpg

Load More