Advertisment

WATCH: ಐದು ಗ್ಯಾರಂಟಿ ಯೋಜನೆ ಒಟ್ಟಿಗೆ ಜಾರಿಯಾಗುತ್ತಾ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

author-image
admin
Updated On
WATCH: ಐದು ಗ್ಯಾರಂಟಿ ಯೋಜನೆ ಒಟ್ಟಿಗೆ ಜಾರಿಯಾಗುತ್ತಾ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Advertisment
  • ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಇಟ್ಟ ಸಿಎಂ
  • ಮನೆ ಯಜಮಾನಿಗೆ ₹2000 ಸಿಗೋದು ಯಾವಾಗ?
  • ಮಹಿಳೆಯರ ಉಚಿತ ಬಸ್ ಪ್ರಯಾಣ ಎಂದಿನಿಂದ?

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಆದಷ್ಟು ಬೇಗ ಜಾರಿ ಮಾಡುವ ಒತ್ತಡಕ್ಕೆ ಸಿಲುಕಿದೆ. ಸಾರ್ವಜನಿಕ ವಲಯದಲ್ಲಿ ಗ್ಯಾರಂಟಿಗಳ ಬಗ್ಗೆ ಭಾರೀ ಚರ್ಚೆ ಆಗ್ತಿದ್ದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೀತು. ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡೋದು ಗ್ಯಾರಂಟಿ ಎಂದಿದ್ದಾರೆ.

Advertisment

ಗ್ಯಾರಂಟಿ ಯೋಜನೆಗಳ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಇಲಾಖಾವಾರು ಸಚಿವರ ಸಭೆ ನಡೆಸಿದರು. ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಜೂನ್ 2 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ  

Advertisment
Advertisment
Advertisment