newsfirstkannada.com

ಕೇಂದ್ರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ವಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ; ಪಾಟ್ನಾದಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳೇನು?

Share :

23-06-2023

    ಪಾಟ್ನಾದಿಂದಲೇ ಹೊಸ ಇತಿಹಾಸ, ಬಿಜೆಪಿ ವಿರುದ್ಧ ಒಗ್ಗಟ್ಟನ ಹೋರಾಟ

    ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅಬ್ಬರ

    BJP ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ರಣತಂತ್ರಗಳ ಬಗ್ಗೆ ನಿರ್ಧಾರ

ಪಾಟ್ನಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟಲು ವಿರೋಧ ಪಕ್ಷಗಳು ನಿರ್ಧಾರ ಮಾಡಿವೆ. ಬಿಹಾರದ ಪಾಟ್ನಾದಲ್ಲಿ ಇಂದು ವಿಪಕ್ಷ ನಾಯಕರ ಮಹತ್ವದ ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಪ್ರಕಟಿಸಿದರು.

ನಾವು ಒಗ್ಗಟ್ಟಾಗಿದ್ದೇವೆ, ಒಗ್ಗಟ್ಟಾಗಿ ಹೋರಾಟ ಮಾಡೋಣ. ಪಾಟ್ನಾದಿಂದಲೇ ಹೊಸ ಇತಿಹಾಸ ಆರಂಭ ಆಗಲಿದೆ. ಬಿಜೆಪಿ ಇತಿಹಾಸದ ಬದಲಾವಣೆಗೆ ಯತ್ನಿಸಿದೆ. ಬಿಹಾರದಿಂದಲೇ ಇತಿಹಾಸ ರಕ್ಷಿಸೋದು ನಮ್ಮ ಬಯಕೆಯಾಗಿದೆ. ಫ್ಯಾಸಿಸ್ಟ್ ಸರ್ಕಾರದ ವಿರುದ್ಧ ಮಾತನಾಡುವುದು ನಮ್ಮ ಉದ್ದೇಶ ಎಂದು ಸಿಎಂ ಮಮತಾ ಬ್ಯಾನರ್ಜಿ ಗುಡುಗಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲು ವಿಪಕ್ಷಗಳು ನಿರ್ಧಾರ ಮಾಡಿವೆ. ನಮ್ಮ ನಮ್ಮ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬ ಬಗ್ಗೆ ಅಜೆಂಡಾ ಸಿದ್ಧಪಡಿಸುತ್ತೇವೆ. ಜುಲೈನಲ್ಲಿ ನಾವು ಶಿಮ್ಲಾದಲ್ಲಿ ಮತ್ತೆ ಸಭೆ ಸೇರುತ್ತೇವೆ ಎಂದು ಹೇಳಿದರು.

ಬಿಜೆಪಿ ಸೋಲಿಸೋ ಅಜೆಂಡಾ ಫಿಕ್ಸ್‌!
ವಿಪಕ್ಷ ನಾಯಕರ ಸುದ್ದಿಗೋಷ್ಟಿಗೂ ಮುನ್ನ ವಿರೋಧ ಪಕ್ಷಗಳ ನಾಯಕರು ರೌಂಡ್ ಟೇಬಲ್ ಮೀಟಿಂಗ್ ಮಾಡಿದ್ದರು. ಈ ಸಭೆಯಲ್ಲಿ 15ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ಸಭೆಯಲ್ಲೇ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸಲೇಬೇಕು ಎಂಬ ಅಜೆಂಡಾ ಫಿಕ್ಸ್ ಮಾಡಲಾಗಿದೆ.

ವಿರೋಧ ಪಕ್ಷಗಳಲ್ಲೇ ಕೆಲ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದರೂ ಸಹ ಅದನ್ನ ಸರಿಪಡಿಸಬೇಕು. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು. ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಅನ್ನೋ ಸಲಹೆಗಳು ಸೇರಿದಂತೆ ಸಾಕಷ್ಟು ವಿಚಾರಗಳು ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ. ಇವತ್ತಿನ ಸಭೆ ಬಹಳ ಪರಿಣಾಮಕಾರಿಯಾಗಿದ್ದು, ಉತ್ತಮವಾದ ಚರ್ಚೆ ಆಗಿದೆ. ಎಲ್ಲರೂ ಸೇರಿ ಒಗ್ಗಟ್ಟಿನಿಂದ 2024ರ ಲೋಕಸಭಾ ಚುನಾವಣೆ ಎದುರಿಸಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಕೇಂದ್ರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ವಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ; ಪಾಟ್ನಾದಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳೇನು?

https://newsfirstlive.com/wp-content/uploads/2023/06/Patna-Congress.jpg

Load More