newsfirstkannada.com

BREAKING: ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಡ್ತಾರಾ ಇಬ್ಬರು ಶಾಸಕರು?

Share :

Published February 27, 2024 at 2:01pm

  ಲೋಕಸಭಾ ಚುನಾವಣೆಗೂ ಮುನ್ನ ಇಬ್ಬರು ಶಾಸಕರ ರಾಜೀನಾಮೆ?

  ತಮ್ಮ ಮಕ್ಕಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರ ಬಳಿ ಚರ್ಚೆ

  ಎಸ್‌.ಟಿ ಸೋಮಶೇಖರ್ ಅಡ್ಡಮತದಾನದ ಹಿಂದಿರೋ ಪ್ಲಾನ್ ಏನು?

ರಾಜ್ಯಸಭಾ ಚುನಾವಣೆಯಲ್ಲಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಈ ಅಡ್ಡ ಮತದಾನದ ಎಫೆಕ್ಟ್ ಜೋರಾಗಿದ್ದು, ಶೀಘ್ರದಲ್ಲೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗಳು ನಡೆಯುವ ಮುನ್ಸೂಚನೆ ನೀಡಿದೆ.

ಲೋಕಸಭಾ ಚುನಾವಣೆಗೂ ಮುನ್ನ ಒಬ್ಬರಲ್ಲ ಇಬ್ಬರು ಶಾಸಕರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬಿಜೆಪಿ ಶಾಸಕರಾದ ಎಸ್.​ಟಿ ಸೋಮಶೇಖರ್ ಹಾಗು ಶಿವರಾಮ ಹೆಬ್ಬಾರ್ ಅವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು ಲೋಕಸಭೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ತಯಾರಿ ನಡೆಸಿದ್ದಾರೆ. ಅಲ್ಲದೇ ಮುಂದೆ ಎದುರಾಗುವ ಉಪಚುನಾವಣೆಯಲ್ಲಿ ತಮ್ಮ ಮಕ್ಕಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರ ಬಳಿ ಎಸ್.​ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಎಸ್​.ಟಿ. ಸೋಮಶೇಖರ್ ತಮ್ಮ ಅಭಿವೃದ್ಧಿ ಮಾತ್ರ ಮಾಡಿಕೊಂಡಿದ್ದಾರೆ -ಕುಮಾರಸ್ವಾಮಿ ವಾಗ್ದಾಳಿ

ಇನ್ನು, ಅಡ್ಡ ಮತದಾನ ಮಾಡಿದ ಶಾಸಕ ಎಸ್‌.ಟಿ ಸೋಮಶೇಖರ್ ವಿರುದ್ಧ ಬಿಜೆಪಿ ವಿಧಾನಸಭೆಯ ಸ್ಪೀಕರ್‌ಗೆ ದೂರು ನೀಡಲು ಮುಂದಾಗಿದೆ. ಸೋಮಶೇಖರ್ ಅವರ ಮತವನ್ನು ಅನರ್ಹಗೊಳಿಸುವಂತೆ ಮನವಿ ಮಾಡಿಕೊಂಡಿದೆ. ಇದರ ಜೊತೆಗೆ ಬಿಜೆಪಿ ಸಚೇತಕ ದೊಡ್ಡನಗೌಡ ಪಾಟೀಲ್​ ಅವರು ಬಿಜೆಪಿ ಪಕ್ಷ ಎಸ್‌.ಟಿ ಸೋಮಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದಿದ್ದಾರೆ. ಅಡ್ಡಮತದಾನದಿಂದ ಬಿಜೆಪಿ ಶಾಸಕರನ್ನ ಪಕ್ಷದಿಂದಲೇ ಉಚ್ಛಾಟನೆ ಮಾಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಡ್ತಾರಾ ಇಬ್ಬರು ಶಾಸಕರು?

https://newsfirstlive.com/wp-content/uploads/2024/02/ST-Somashekar-MLA.jpg

Load More