/newsfirstlive-kannada/media/post_attachments/wp-content/uploads/2024/10/Lady-Of-Justice.jpg)
ನ್ಯಾಯಾಲಯಕ್ಕೆ ಹೋದಾಗ ನಮಗೆ ಸಾಧಾರಣವಾಗಿ ಕಾಣ ಸಿಗೋದು ಅಲ್ಲಿರುವ ನ್ಯಾಯದೇವತೆ. ಯಾರನ್ನೂ ಎಂದಿಗೂ ಬೇಧ ಭಾವ ಮಾಡದಂತೆ ನೋಡುವ ನ್ಯಾಯದೇವತೆಯ ಕಣ್ಣಿಗೆ ಪಟ್ಟಿ ಕಟ್ಟಲಾಗುತ್ತಿತ್ತು. ಇದಕ್ಕೆ ಕಾರಣ ಅಂದರೆ ಬಂದ ಆರೋಪಿಗಳಲ್ಲಿ ಬಡವ ಶ್ರೀಮಂತ, ಉಳ್ಳವ ಇಲ್ಲದವ ಎಂಬುದನ್ನು ಕಾಣದಿರಲಿ ಎಂದು ದೇವಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿರುತ್ತದೆ. ಆದ್ರೆ ಇನ್ಮುಂದೆ ಭಾರತದ ಯಾವುದೇ ನ್ಯಾಯಾಲಯಗಳಲ್ಲಿ ನ್ಯಾಯದೇವತೆ ಕಣ್ಣಿಗೆ ಬಟ್ಟೆಕಟ್ಟಿಕೊಂಡಿರುವುದಿಲ್ಲ ಅಂತಹ ಒಂದು ಸೂಚನೆಯನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ ಅವರು ನೀಡಿದ್ದಾರೆ.
ಇದನ್ನೂ ಓದಿ: 24/7 ಪೊಲೀಸ್ ಗಸ್ತು, AI ವ್ಯವಸ್ಥೆಯ CCTV ಕ್ಯಾಮೆರಾ; ಹೇಗಿದೆ ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ..?
ಸಿಜೆಐ ಡಿ.ವೈ. ಚಂದ್ರಚೂಡ ಇಂತಹದೊಂದು ಸೂಚನೆಯನ್ನು ದೇಶದ ಎಲ್ಲಾ ನ್ಯಾಯಾಲಯಗಳಿಗೆ ನೀಡಿದ್ದಾರೆ. ಇನ್ಮುಂದೆ ನ್ಯಾಯದೇವತೆಯ ಕಣ್ಣಿನ ಬಟ್ಟೆ ತೆಗೆದು ಹೊಸ ರೂಪದಲ್ಲಿ ಇಡುವಂತೆ ಹೇಳಿದ್ದಾರೆ. ಅದು ಮಾತ್ರವಲ್ಲ, ನ್ಯಾಯದೇವತೆಯ ಕೈಯಲ್ಲಿ ಖಡ್ಗದ ಬದಲು ಭಾರತದ ಸಂವಿಧಾನ ನೀಡಲು ಕೂಡ ಹೇಳಿದ್ದಾರೆ. ಸಿಜೆಐ ಆದೇಶದಂತೆ ಈಗಾಗಲೇ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಗ್ರಂಥಾಲಯದಲ್ಲಿ ಹೊಸ ನ್ಯಾಯದೇವತೆಯ ಮೂರ್ತಿ ಅನಾವರಣ ಮಾಡಲಾಗಿದೆ.
ನ್ಯಾಯದೇವತೆಯ ಇತಿಹಾಸವೇನು?
ಸದ್ಯ ನಮ್ಮ ದೇಶದಲ್ಲಿ ಕಾಣುವ ನ್ಯಾಯದೇವತೆಯ ಮೂರ್ತಿ ಮೂಲತಃ ರೋಮ್ ಸಾಮ್ರಾಜ್ಯದ ಕಲ್ಪನೆ. ಇದು ಮೊದಲ ಬಾರಿ ಕಂಡು ಬಂದಿದ್ದು ರೋಮ್ನ ಆಗಸ್ಟಸ್ ಸಾಮ್ರಾಜ್ಯದಲ್ಲಿ ನ್ಯಾಯದೇವತೆ ಅಂದ್ರೆ ಲೇಡಿ ಆಫ್ ಜಸ್ಟಿಸ್ ರೋಮನ್ ಪುರಾಣಗಳಲ್ಲಿ ಬರುವ ಜಸ್ಟಿಟಿಯಾ ಎಂಬ ದೇವತೆ. ಅವಳು ನ್ಯಾಯಕ್ಕೆ ಅಧಿಪತಿ 16ನೇ ಶತಮಾನದಲ್ಲಿ ಮೊದಲ ಬಾರಿ ಈ ನ್ಯಾಯದೇವತೆಯ ಕಣ್ಣಿಗೆ ಬಟ್ಟೆಯನ್ನು ಕಟ್ಟಲಾಯ್ತು. ಯಾರಿಗೂ ಕೂಡ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ, ನ್ಯಾಯದೇವತೆಯೂ ಕೂಡ ಬಂದ ಆರೋಪಿಗಳಲ್ಲಿ ಬೇಧ ಭಾವ ಎಣಿಸದಿರಲಿ ಎಂಬ ಉದ್ದೇಶದಿಂದ ನ್ಯಾಯದೇವತೆಯ ಕಣ್ಣಿಗೆ ಪಟ್ಟಿಕಟ್ಟಲಾಯ್ತು.
16ನೇ ಶತಮಾನದಿಂದಲೂ ನ್ಯಾಯದೇವತೆ ಇದೇ ರೀತಿ ಕಣ್ಣಿಗೆ ಪಟ್ಟಿಕಟ್ಟಿಕೊಂಡು ಹಾಗೂ ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡ ರೂಪದಲ್ಲಿಯೇ ಇದ್ದಾಳೆ. ವಿಶ್ವದ ಅನೇಕ ರಾಷ್ಟ್ರಗಳ ಕೋರ್ಟ್ನಲ್ಲಿ ಇದೇ ನ್ಯಾಯದೇವತೆಯನ್ನು ಕೋರ್ಟ್ನಲ್ಲಿ ಇಡಲಾಗಿದೆ. ಮೊಟ್ಟ ಮೊದಲ ಬಾರಿ ಈ ನ್ಯಾಯದೇವತೆಯ ಎದುರು ಕೋರ್ಟ್ ವಿಚಾರಣೆ ನಡೆಸಿದ ನ್ಯಾಯಮೂರ್ತಿಳು ಹನ್ಸ್ ಗೈಂಗ್,1543ರಲ್ಲಿ ಬರ್ನ್ನಲ್ಲಿ ಈ ನ್ಯಾಯದೇವತೆಯ ಎದುರು ಮೊದಲ ವಿಚಾರಣೆ ನಡೆಸಲಾಗಿತ್ತು. ಆಗ ಬರ್ನ್ ರೋಮನ್ ಸಾಮ್ರಾಜ್ಯದ ಒಂದು ಭಾಗವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ