ಮಕ್ಕಳಾಗಿಲ್ಲವೆಂದು ಒಂದೂವರೆ ತಿಂಗಳಿಂದ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ
ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ಮಾನಸ, ಅರುಣ್ ಜೋಡಿ
ಅತಿಥಿ ಉಪನ್ಯಾಸಕರಾಗಿ ತುಮಕೂರು ವಿವಿಯಲ್ಲಿ ಕೆಲಸ ಮಾಡ್ತಿದ್ದ ಮಾನಸ
ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರೋ ಘಟನೆ ತುಮಕೂರಿನ ಮಹಾಲಕ್ಷ್ಮಿನಗರದಲ್ಲಿನ ಚಿನ್ಮಯ ನರ್ಸಿಂಗ್ ಹೋಮ್‌ನಲ್ಲಿ ನಡೆದಿದೆ. ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಕುಟುಂಬಸ್ಥರು ಹಾಗೂ ಪತಿ ಆರೋಪಿಸಿದ್ದಾರೆ.
ಅತಿಥಿ ಉಪನ್ಯಾಸಕಿ ಮಾನಸ (30) ಮೃತ ದುರ್ದೈವಿ. ಮಾನಸ ಅವರು ತುಮಕೂರಿನ ವಿವಿಯಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಅರುಣ್ ಎಂಬುವರನ್ನು ವರಿಸಿದ್ದರು. ನಂತರದ ದಾಂಪತ್ಯ ಜೀವನದಲ್ಲಿ ಮಕ್ಕಳು ಆಗಿರಲಿಲ್ಲ. ಹೀಗಾಗಿ ಕಳೆದ ಒಂದೂವರೆ ತಿಂಗಳಿನಿಂದ ಚಿನ್ಮಯ ಆಸ್ಪತ್ರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಗರ್ಭಕೋಶದಲ್ಲಿ 3 ಗ್ರಾಮ್ ಗಡ್ಡೆಯಿದೆ. ಅದನ್ನು ಆಪರೇಷನ್ ಮಾಡಿ ತೆಗೆಯಬೇಕೆಂದು ವೈದ್ಯರು ಹೇಳಿದ್ದರು. ಹೀಗಾಗಿ ಮೊನ್ನೆ ಸಂಜೆ ಆಪರೇಷನ್ಗೆಂದು ಆಸ್ಪತ್ರೆಗೆ ಮಾನಸ ದಾಖಲಾಗಿದ್ದರು. ನಿನ್ನೆ ರಾತ್ರಿ ಆಪರೇಷನ್ ಮಾಡುವಾಗ ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು, ಸಂಬಂಧಿಕರು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಮಾನಸಳನ್ನು ಕಳೆದುಕೊಂಡ ಪೋಷಕರು, ಆಕೆಯ ಗಂಡನ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಈ ಬಗ್ಗೆ ಹೊಸ ಬಡಾವಣೆ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ದಾಖಲು ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ