ಸಂತ್ರಸ್ತೆ ಕಿಡ್ನಾಪ್​ ಕೇಸ್​​.. ಬಂಧನ ಭೀತಿಯಲ್ಲಿರೋ ಭವಾನಿ ರೇವಣ್ಣಗೆ ಬಿಗ್​ ಶಾಕ್​​

author-image
Veena Gangani
Updated On
ಭವಾನಿ ಅಜ್ಞಾತವಾಸಿ.. ಇವರ ಕಾರು ಡ್ರೈವರ್​ಗೂ ಶುರುವಾಗಿದೆ ಢವಢವ.. ಏನಿದು ಪ್ರಕರಣ..?
Advertisment
  • ಕೆ ಆರ್ ನಗರ ಸಂತ್ರಸ್ಥ ಮಹಿಳೆ ಕಿಡ್ನಾಪ್ ಕೇಸ್​ನಲ್ಲಿ ಭವಾನಿ ರೇವಣ್ಣಗೆ ಆತಂಕ
  • ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
  • ಬಂಧನ ಭೀತಿಯಿದೆ ಎಂದು ಜಾಮೀನಿಗೆ ಮನವಿ ಮಾಡಿದ್ದ ಭವಾನಿ ರೇವಣ್ಣ ವಕೀಲರು

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆ ಅಪಹರಣ ಕೇಸ್​ ಸಂಬಂಧ ಬಂಧನ ಭೀತಿಯಲ್ಲಿರುವ ಹೆಚ್​.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ಮುಂದೂಡಿಕೆ ಮಾಡಲಾಗಿದೆ.

publive-image

ಇದನ್ನೂ ಓದಿ:ಅಂತೆ-ಕಂತೆ ವದಂತಿಗಳ ಮಧ್ಯೆ ಟ್ವೀಟ್ ಮಾಡಿ ನಾಲ್ಕು ಫೋಟೋ ಶೇರ್ ಮಾಡಿದ ಹಾರ್ದಿಕ್ ಪಾಂಡ್ಯ

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರ ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಮೇ 31ಕ್ಕೆ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಏನಿದು ಕೇಸ್​​..?

ಮಹಿಳೆಯ ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಹೇಳಿಕೆ ದಾಖಲಿಸಿಕೊಂಡಿದ್ದ ಎಸ್​ಐಟಿ, ಅವರ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಸಹ ಪರಿಶೀಲನೆ ಮಾಡಿತ್ತು. ಈ ವೇಳೆ ಭವಾನಿ ರೇವಣ್ಣ ಮತ್ತು ಸತೀಶ್ ಬಾಬು ಕರೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೇ ಆಧಾರದ ಮೇಲೆ ಭವಾನಿ ಅವರನ್ನು ವಿಚಾರಣೆ ನಡೆಸಲು ಎಸ್​ಐಟಿ ನೋಟಿಸ್ ಜಾರಿ ಮಾಡಿತ್ತು. ಆದರೆ ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಇದರಿಂದ ಭವಾನಿ ರೇವಣ್ಣ ಅವರಗೆ ಬಂಧನ ಭೀತಿ ಎದುರಾಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ವಕೀಲರ ಮೂಲಕ ಭವಾನಿ ರೇವಣ್ಣ ಅವರು ಮನವಿ ಮಾಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment