/newsfirstlive-kannada/media/post_attachments/wp-content/uploads/2024/04/LOVE-2.jpg)
17 ವರ್ಷದ ಬಾಲಕನೊಬ್ಬ ತನ್ನ ಪ್ರಿಯತಮೆಯ ಮನೆಗೆ ಎಂಟ್ರಿ ನೀಡಿ ಆಕೆಯ ತಾಯಿ ಮೇಲೆ ಫೈರಿಂಗ್ ಮಾಡಿ ಗುಂಡಿಟ್ಟು ಸಾಯಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿರೋದೇ ಹತ್ಯೆಗೆ ಪ್ರಮುಖ ಕಾರಣ ಎಂದು ತನಿಖೆಯಿಂದ ತಿಳಿದುಕೊಂಡಿದೆ.
30 ವರ್ಷದ ಮಹಿಳೆ ಮೇಲೆ ಎರಡು ಬಾರಿ ಗುಂಡು ಹಾರಿಸಿದ್ದ. ಎದೆಯ ಭಾಗಕ್ಕೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಾರೆ. ಕೂಡಲೇ ಅವರನ್ನು ಬಿಜೆಆರ್​ಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ‘ಬಾರೋ ಬಾರೋ ಮಳೆರಾಯ..’ 48 ಗಂಟೆಯಲ್ಲಿ ತಂಪೆರೆಯಲಿದೆ ಮಳೆ..! ಎಲ್ಲೆಲ್ಲಿ..?
ಬಾಲಕಿಯ ಮನೆಗೆ ಮೂವರು ಎಂಟ್ರಿಕೊಟ್ಟಿದ್ದರು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈ ಮೂವರು ಕೂಡ ಅಪ್ರಾಪ್ತರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸದ್ಯ ಕೊಲೆ ಮಾಡಿದವರು ತಲೆ ಮರೆಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us