ಸಿದ್ದರಾಮಯ್ಯ ಸರ್ಕಾರ ಕೊಟ್ಟ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಕೆ
ಸೊಸೆ ಕೂಲಿ ಕೆಲಸಕ್ಕೆ ಹೋಗಬಾರದು ಎಂದು ಅತ್ತೆ ಸಖತ್ ಪ್ಲಾನ್!
ತನಗೆ ಬಂದ ಹಣವನ್ನು ಸೊಸೆಯ ಕೆಲಸಕ್ಕಾಗಿ ಮೀಸಲಿಟ್ಟ ದ್ರಾಕ್ಷಾಯಿಣಿ
ಹಾವೇರಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ತಿಂಗಳಿಗೆ ಮನೆ ಬಾಗಿಲಿಗೆ ಬರೋ ಹಣವನ್ನು ಪಡೆದುಕೊಳ್ಳಲು ಸಲುವಾಗಿ ನಾ ಮುಂದು, ತಾ ಮುಂದು ಎಂದು ಸರತಿ ಸಾಲಿನಲ್ಲಿ ನಿಂತು ಅಪ್ಲಿಕೇಷನ್ ಹಾಕಿದ್ದರು. ಅದರಂತೆ ಮನೆಯ ಒಡತಿಗೆ ಹಣ ಬಂದು ಅಕೌಂಟ್ಗೆ ಬರುತ್ತಿದ್ದವು.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ; ಅಜ್ಜಿ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ
ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಅಜ್ಜಿ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ಊರಿಗೆಲ್ಲಾ ಊಟ ಹಾಕಿಸಿದ್ದರು. ಮತ್ತೊಬ್ಬ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಹಾವೇರಿಯಲ್ಲಿ ಶಿಗ್ಗಾಂವಿ ಪಟ್ಟಣದ ನಿವಾಸಿಯಾದ ಲತಾ ಎಂಬ ಗೃಹಿಣಿ ಕೂಡ ಹೊಸ ಫ್ರಿಡ್ಜ್ ಖರೀದಿಸಿದ್ದರು. ಇದೀಗ ಈ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಅತ್ತೆಯೊಬ್ಬರು ತನ್ನ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಟ್ಟಿದ್ದಾರೆ.
ಹೌದು, ಸೊಸೆ ಕೂಲಿ ಕೆಲಸಕ್ಕೆ ಹೊರಗೆ ಹೋಗಬಾರದು ಅಂತ ಅತ್ತೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ಇಟ್ಟುಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟಿದ್ದರು. 10 ಕಂತಿನ 20,000 ರೂಪಾಯಿ ಹಣ ಕೂಡಿಟ್ಟು ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ಗೆ ಫ್ಯಾನ್ಸಿ ಸ್ಟೋರ್ ಇಟ್ಟುಕೊಟ್ಟಿದ್ದಾರೆ. ಸಾಕಷ್ಟು ಮಹಿಳೆಯರು ಕಾಂಗ್ರೆಸ್ನಿಂದ ಬಂದ ಹಣದಿಂದ ಬಂಗಾರ, ಫ್ರಿಜ್, ಟಿವಿ ಇನ್ನು ಹತ್ತು ಹಲವಾರು ವಸ್ತುಗಳನ್ನು ಖರೀದಿಸಿದ್ದಾರೆ. ಆದರೆ ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ಅವರು ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್ ಇಟ್ಟುಕೊಟ್ಟಿದ್ದು ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ