ಧರ್ಮಶಾಲಾದಲ್ಲಿ ವಿಶ್ವಕಪ್ನ 21ನೇ ಪಂದ್ಯ
ಬಲಿಷ್ಠ ಭಾರತ-ನ್ಯೂಜಿಲೆಂಡ್ ಮುಖಾಮುಖಿ
ಇವತ್ತು ಗೆದ್ದವರಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಮೈದಾನವು ಇವತ್ತು ವಿಶ್ವಕಪ್ನ 21ನೇ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಹೈ-ವೋಲ್ಟೇಜ್ನ ಇವತ್ತಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ಎದುರಿಸಲಿದೆ.
ಎರಡೂ ತಂಡಗಳು ತುಂಬಾನೇ ಬಲಿಷ್ಠವಾಗಿದ್ದು, ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿವೆ. ನಾಲ್ಕೂ ಪಂದ್ಯಗಳನ್ನು ಗೆದ್ದುಕೊಂಡು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿವೆ. ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಇಂದು ಸೋಲಿಲ್ಲದವರ ಪಂದ್ಯ ಎಂದೇ ಹೇಳಲಾಗುತ್ತಿದೆ.
ಇನ್ನು ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯನ್ನು ನಿರೀಕ್ಷೆ ಮಾಡಲಾಗಿದೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಇವತ್ತಿನ ಪಂದ್ಯವನ್ನು ಆಡುತ್ತಿಲ್ಲ. ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಮತ್ತೊಂದು ಕಡೆ ಶಮಿ ಅವರನ್ನು ಆಡಿಸಬೇಕು ಎಂದು ಹೇಳಲಾಗುತ್ತಿದೆ. ಹೀಗಾಗಿ ಇವತ್ತು ಪಾಂಡ್ಯ ಬದಲಿ ಆಟಗಾರ ಯಾರು ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್